Publish Date: Sun, 12 Feb 2023 (08:00 IST)
Updated Date: Sun, 12 Feb 2023 (08:06 IST)
ಮುಂಬೈ: ಟೀಂ ಇಂಡಿಯಾಗೆ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ದೊಡ್ಡ ತಲೆನೋವಾಗಿದೆ. ಕಳೆದ ಐದು ತಿಂಗಳಿನಿಂದ ಬುಮ್ರಾ ಕ್ರಿಕೆಟ್ ಆಡಿಲ್ಲ.
ಬೆನ್ನು ನೋವಿನಿಂದಾಗಿ ಕಳೆದ ಬಾರಿ ಆಸ್ಟ್ರೇಲಿಯಾ ಸರಣಿಯಿಂದ ಹೊರಬಿದ್ದಿದ್ದ ಬುಮ್ರಾ ಬಳಿಕ ಏಷ್ಯಾ ಕಪ್, ಟಿ20 ವಿಶ್ವಕಪ್ ಸೇರಿದಂತೆ ಎಲ್ಲಾ ಸರಣಿಗಳಿಂದಲೂ ಹೊರಗುಳಿದಿದ್ದರು. ಇದೀಗ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೂ ಅವರು ಆಯ್ಕೆಯಾಗಿದ್ದರು.
ಆದರೆ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬುಮ್ರಾ ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ. ಹೀಗಾಗಿ ಅವರ ವಿಚಾರದಲ್ಲಿ ರಿಸ್ಕ್ ತೆಗೆದುಕೊಳ್ಳದೇ ಇರಲು ಬಿಸಿಸಿಐ ತೀರ್ಮಾನಿಸಿದೆ. ಹೀಗಾಗಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಿಂದ ಸಂಪೂರ್ಣವಾಗಿ ಅವರನ್ನು ಹೊರಗಿಡಲಾಗಿದೆ.