ಮುಂಬೈ: ಬೆನ್ನು ನೋವಿಗೊಳಗಾಗಿರುವ ಟೀಂ ಇಂಡಿಯಾ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್ ನಿಂದ ಹೊರಗುಳಿಯಲಿದ್ದಾರೆ ಎಂಬ ಸುದ್ದಿಗಳಿತ್ತು.
ಆದರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬುಮ್ರಾ ಇನ್ನೂ ಟಿ20 ವಿಶ್ವಕಪ್ ನಿಂದ ಹೊರಬಿದ್ದಿಲ್ಲ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಸದ್ಯಕ್ಕೆ ಬುಮ್ರಾ ವಿಶ್ವಕಪ್ ನಿಂದ ಹೊರಗುಳಿಯಲಿದ್ದಾರೆ ಎಂದು ಖಚಿತವಾಗಿ ಹೇಳಲಾಗದು. ಅವರೀಗ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಮುಂದಿನ ಎರಡು-ಮೂರು ದಿನಗಳಲ್ಲಿ ಅವರು ವಿಶ್ವಕಪ್ ನಲ್ಲಿ ಭಾಗಿಯಾಗುವ ಬಗ್ಗೆ ಖಚಿತ ನಿರ್ಧಾರ ಮಾಡಲಾಗುತ್ತದೆ ಎಂದಿದ್ದಾರೆ ಗಂಗೂಲಿ.
-Edited by Rajesh Patil