Select Your Language

Notifications

webdunia
webdunia
webdunia
webdunia

ಕನ್ನಡಿಗ ರಾಹುಲ್ ದ್ರಾವಿಡ್ ದಾಖಲೆಯನ್ನು ಕೆಎಲ್ ರಾಹುಲ್ ಮುರಿದ್ರು

KL Rahul

Krishnaveni K

ಲೀಡ್ಸ್ , ಮಂಗಳವಾರ, 24 ಜೂನ್ 2025 (09:38 IST)
ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ ನಲ್ಲಿ ಶತಕ ದಾಖಲಿಸಿದ ಕನ್ನಡಿಗ ಕೆಎಲ್ ರಾಹುಲ್ ಮತ್ತೊಬ್ಬ ಕನ್ನಡಿಗ ರಾಹುಲ್ ದ್ರಾವಿಡ್ ದಾಖಲೆಯನ್ನು ಮುರಿದರು.

ರಾಹುಲ್ ದ್ರಾವಿಡ್ ಕೂಡಾ ಇಂಗ್ಲೆಂಡ್ ನೆಲದಲ್ಲಿ ಅದ್ಭುತವಾಗಿ ಆಡುತ್ತಿದ್ದರು. ಇದೀಗ ಕೆಎಲ್ ರಾಹುಲ್ ಕೂಡಾ ಇಂಗ್ಲೆಂಡ್ ವಿರುದ್ಧ ಅದ್ಭುತವಾಗಿಯೇ ಆಡುತ್ತಿದ್ದಾರೆ. ಈ ಹಿಂದೆಯೂ ಅವರು ಇಂಗ್ಲೆಂಡ್ ನೆಲದಲ್ಲಿ ಉತ್ತಮ ಪ್ರದರ್ಶನವನ್ನೇ ತೋರಿದ್ದರು.

ಇದೀಗ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯದಲ್ಲೂ ಕೆಎಲ್ ರಾಹುಲ್ ಅದ್ಭುತ ಹೊಡೆತಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಎರಡನೇ ಇನಿಂಗ್ಸ್ ನಲ್ಲಿ ಶತಕ ದಾಖಲಿಸಿದ ಅವರು ರಾಹುಲ್ ದ್ರಾವಿಡ್ ಅವರ ದಾಖಲೆಯೊಂದನ್ನು ಮುರಿದಿದ್ದಾರೆ.

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಎರಡು ಶತಕ ದಾಖಲಿಸಿದ ಏಕೈಕ ಏಷ್ಯನ್ ಬ್ಯಾಟಿಗ ಎಂಬ ದಾಖಲೆ ದ್ರಾವಿಡ್ ಹೆಸರಲ್ಲಿತ್ತು. ಆ ದಾಖಲೆ ಈಗ ಕೆಎಲ್ ರಾಹುಲ್ ತಮ್ಮದಾಗಿಸಿಕೊಂಡಿದ್ದಾರೆ. ಇಂಗ್ಲೆಂಡ್ ನೆಲದಲ್ಲಿ ಆರಂಭಿಕನಾಗಿ ರಾಹುಲ್ ಇದೀಗ 3 ಶತಕ ಗಳಿಸಿದಂತಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

IND vs ENG: ಆಂಗ್ಲರ ವಿರುದ್ಧ ಶತಕ ಬಾರಿಸಿದ ಕನ್ನಡಿಗ ಕೆಎಲ್‌ ರಾಹುಲ್‌