ನವದೆಹಲಿ: ಪ್ರತಿಷ್ಠಿತ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂದು ಕರ್ನಾಟಕ ಮತ್ತು ಹಾಲಿ ಚಾಂಪಿಯನ್ ತಮಿಳುನಾಡು ಪರಸ್ಪರ ಮುಖಾಮುಖಿಯಾಗಲಿದೆ.
ಮನೀಶ್ ಪಾಂಡೆ ನೇತೃತ್ವದ ಕರ್ನಾಟಕ ತಂಡಕ್ಕೆ ಬ್ಯಾಟಿಂಗ್ ಬಲ. ನಾಯಕ ಮನೀಶ್, ರೋಹನ್ ಕದಂ, ಅನಿರುದ್ಧ ಜೋಶಿ ಬಲವಿದೆ. ಆದರೆ ಬೌಲಿಂಗ್ ನಲ್ಲಿ ಇದುವರೆಗೆ ಕೊಂಚ ಹಿನ್ನಡೆ ಅನುಭವಿಸಿದೆ.
ಕರ್ನಾಟಕಕ್ಕೆ ಹೋಲಿಸಿದರೆ ತಮಿಳುನಾಡು ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಬಲಿಷ್ಠವಾಗಿದೆ. ಸ್ವತಃ ನಾಯಕ ವಿಜಯ್ ಶಂಕರ್ ತಮಿಳುನಾಡಿನ ಕೀ ಆಟಗಾರ. ಉಭಯ ತಂಡಗಳಲ್ಲಿ ಯಾವುದೇ ತಂಡ ಗೆದ್ದರೂ ಇದು ಮೂರನೇ ಪ್ರಶಸ್ತಿಯಾಗಲಿದೆ. ಈ ಪಂದ್ಯ ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ.