Publish Date: Tue, 12 Jun 2018 (09:16 IST)
Updated Date: Tue, 12 Jun 2018 (09:18 IST)
ಬೆಂಗಳೂರು: ಭಾರತ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ತ್ರಿಶತಕ ಭಾರಿಸಿದ ಎರಡನೇ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆ ಹೊಂದಿರುವ ಕನ್ನಡಿಗ ಕರುಣ್ ನಾಯರ್ ಗೆ ಮತ್ತೆ ತವರಿನಲ್ಲಿ ಮೋಡಿ ಮಾಡುವ ಅವಕಾಶ ಸಿಗುತ್ತಾ?
ಅಫ್ಘಾನಿಸ್ತಾನದ ವಿರುದ್ಧ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 14 ರಿಂದ ಏಕೈಕ ಟೆಸ್ಟ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಕರುಣ್ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.
ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯಾ ರೆಹಾನೆ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಪಂದ್ಯದಲ್ಲಿ ತಮಗೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಕರುಣ್ ಇದ್ದಾರೆ. ಇದಾದ ಬಳಿಕ ಭಾರತ ಎ ತಂಡದ ಜತೆಗೆ ಕರುಣ್ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದಾರೆ. ಆದರೆ ಅದಕ್ಕಿಂತ ಮೊದಲು ಅಫ್ಘಾನಿಸ್ತಾನ ವಿರುದ್ಧ ಉತ್ತಮ ಪ್ರದರ್ಶನ ತೋರಿ ಟೀಂ ಇಂಡಿಯಾಕ್ಕೆ ಮತ್ತೆ ಖಾಯಂ ಸದಸ್ಯರಾಗುವ ಉತ್ಸಾಹದಲ್ಲಿ ಅವರಿದ್ದಾರೆ. ಆದರೆ ಅದಕ್ಕೆ ನಾಡಿದ್ದು ಆಡುವ ಬಳಗದಲ್ಲಿ ಸ್ಥಾನ ಸಿಗಬೇಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.