ಬೆಂಗಳೂರು: ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ಕನ್ನಡಿಗ ಕ್ರಿಕೆಟಿಗ ಕೃಷ್ಣಪ್ಪ ಗೌತಮ್ ಗೆ ಕಿಚ್ಚ ಸುದೀಪ್ ಶುಭ ಹಾರೈಸಿದ್ದಾರೆ.
ಕರ್ನಾಟಕ ಕ್ರಿಕೆಟಿಗರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಸುದೀಪ್, ಕೃಷ್ಣಪ್ಪ ಗೌತಮ್ ಟೀಂ ಇಂಡಿಯಾ ಬ್ಲೂ ಜೆರ್ಸಿಯಲ್ಲಿರುವ ಫೋಟೋ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಭಿನಂದನೆಗಳು ಗೌತಮ್. ನಿಮ್ಮ ಬಗ್ಗೆ ನನಗೆ ಹೆಮ್ಮೆಯಾಗುತ್ತಿದೆ. ಚೆನ್ನಾಗಿ ಆಡು ಎಂದು ಸುದೀಪ್ ಹಾರೈಸಿದ್ದಾರೆ. ಜುಲೈ 18 ರಿಂದ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ ಲಂಕಾ ವಿರುದ್ಧ ಏಕದಿನ ಸರಣಿ ಆಡಲಿದೆ.