ವೆಸ್ಟ್ ಇಂಡೀಸ್ ತಂಡದ ಬ್ಯಾಟ್ಸ್‌ಮೆನ್ ಕಿರೋನ್ ಪೊಲಾರ್ಡ್ ಏಕದಿನ ಪಂದ್ಯಗಳಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ನಾಲ್ಕನೇ ಬ್ಯಾಟ್ಸ್‌ಮೆನ್ ಎನ್ನುವ ಗೌರವಕ್ಕೆ ಪಾತ್ರರಾಗಿದ್ದಾರೆ.
ಪೊಲಾರ್ಡ್ ಗುವಾನಾ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ತಮ್ಮ 100 ನೇ ಸಿಕ್ಸರ್ ದಾಖಲಿಸಿದ್ದಾರೆ.
ದಕ್ಷಿಣ ಆಫ್ರಿಕಾದ 188 ರನ್‌ಗಳ ಸವಾಲನ್ನು ಬೆನ್ನಟ್ಟಿದ ಬಲಗೈ ಮಧ್ಯಮ ಕ್ರಮಂಕದ ಬ್ಯಾಟ್ಸ್‌ಮೆನ್ ಪೊಲಾರ್ಡ್, ಆರು ಸಿಕ್ಸರ್ ಮತ್ತು ಎರಡು ಬೌಂಡರಿಗಳೊಂದಿಗೆ 67 ಎಸೆತಗಳಲ್ಲಿ 67 ರನ್‌ಗಳನ್ನು ಪೇರಿಸಿ ತಂಡಕ್ಕೆ ಭದ್ರ ನೆಲೆಯನ್ನು ಒದಗಿಸಿಕೊಟ್ಟರು.
ವೆಸ್ಟ್ ಇಂಡೀಸ್ ತಂಡದ 100 ಸಿಕ್ಸರ್‌ಗಳನ್ನು ದಾಖಲಿಸಿದ ದಿಗ್ಗಜ ಕ್ರಿಕೆಟಿಗರಾದ ವಿವಿಯನ್ ರಿಚರ್ಡ್ಸ್, ಬ್ರಿಯಾನ್ ಲಾರಾ ಮತ್ತು ಕ್ರಿಸ್ ಗೇಲ್ ನಂತರ ಸ್ಥಾನವನ್ನು ಕಿರೋನ್ ಪೊಲಾರ್ಡ್ ಪಡೆದಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.