Publish Date: Sat, 13 Aug 2022 (09:20 IST)
Updated Date: Sat, 13 Aug 2022 (09:33 IST)
ನವದೆಹಲಿ: ಜಿಂಬಾಬ್ವೆ ವಿರುದ್ಧ ಏಕದಿನ ಸರಣಿಗೆ ಕೆಎಲ್ ರಾಹುಲ್ ನೇತೃತ್ವದ ಟೀಂ ಇಂಡಿಯಾ ಪ್ರಯಾಣ ಬೆಳೆಸಿದೆ.
ಕೆಎಲ್ ರಾಹುಲ್, ಶಿಖರ್ ಧವನ್, ರಾಹುಲ್ ತ್ರಿಪಾಠಿ ಸೇರಿದಂತೆ ಟೀಂ ಇಂಡಿಯಾ ಸೇರಿದಂತೆ ಟೀಂ ಇಂಡಿಯಾ ಸದಸ್ಯರು ವಿಮಾನ ಪ್ರಯಾಣ ಮಾಡುವ ಫೋಟೋಗಳನ್ನು ಬಿಸಿಸಿಐ ಹಂಚಿಕೊಂಡಿದೆ.
ಜಿಂಬಾಬ್ವೆಯಲ್ಲಿ ಭಾರತ ತಂಡ ಮೂರು ಏಕದಿನ ಪಂದ್ಯವಾಡಲಿದೆ. ಈ ಮೊದಲು ಈ ಸರಣಿಗೆ ಶಿಖರ್ ಧವನ್ ನಾಯಕರಾಗಿ ನೇಮಕಗೊಂಡಿದ್ದರು. ಆದರೆ ಕೊನೆ ಕ್ಷಣದಲ್ಲಿ ಕೆಎಲ್ ರಾಹುಲ್ ಫಿಟ್ನೆಸ್ ಸಾಬೀತುಪಡಿಸಿದ್ದರಿಂದ ಅವರನ್ನು ನಾಯಕರಾಗಿ ನೇಮಕ ಮಾಡಲಾಗಿದೆ. ಇನ್ನು ರಾಹುಲ್ ದ್ರಾವಿಡ್ ಬದಲು ವಿವಿಎಸ್ ಲಕ್ಷ್ಮಣ್ ತಂಡದ ಕೋಚ್ ಆಗಿರುತ್ತಾರೆ.