Select Your Language

Notifications

webdunia
webdunia
webdunia
webdunia

ಕೆಎಲ್ ರಾಹುಲ್ ಶತಕದ ಮೇಲೆ ಟೀಂ ಇಂಡಿಯಾ ಸವಾರಿ

ಕೆಎಲ್ ರಾಹುಲ್ ಶತಕದ ಮೇಲೆ ಟೀಂ ಇಂಡಿಯಾ ಸವಾರಿ
ಲಾರ್ಡ್ಸ್ , ಶುಕ್ರವಾರ, 13 ಆಗಸ್ಟ್ 2021 (08:39 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನ ಕೆಎಲ್ ರಾಹುಲ್ ಭರ್ಜರಿ ಶತಕದ ನೆರವಿನಿಂದ ಟೀಂ ಇಂಡಿಯಾ ಸುಸ್ಥಿತಿಯಲ್ಲಿದೆ.


ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ನಿನ್ನೆಯ ದಿನದಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 276 ರನ್ ಗಳಿಸಿದೆ. ಕೆಎಲ್ ರಾಹುಲ್ ಬಹಳ ದಿನಗಳ ನಂತರ ಟೆಸ್ಟ್ ತಂಡಕ್ಕೆ ಪುನರಾಗಮನವಾದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವುದಲ್ಲದೆ, ತಂಡಕ್ಕೂ ಆಧಾರವಾಗಿದ್ದಾರೆ. ಇದೀಗ ಅವರು 127 ರನ್ ಗಳಿಸಿ ಇಂದಿಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. 1 ರನ್ ಗಳಿಸಿರುವ ಅಜಿಂಕ್ಯಾ ರೆಹಾನೆ ಸಾಥ್ ನೀಡುತ್ತಿದ್ದಾರೆ.

ಇದಕ್ಕೂ ಮೊದಲು ಉತ್ತಮ ಲಯದಲ್ಲಿದ್ದ ರೋಹಿತ್ ಶರ್ಮಾ 83 ರನ್ ಗಳಿಸಿ ಔಟಾದರು. ಚೇತೇಶ್ವರ ಪೂಜಾರ ಮತ್ತೆ ವೈಫಲ್ಯ ಅನುಭವಿಸಿದ್ದು 9 ರನ್ ಗೆ ವಿಕೆಟ್ ಒಪ್ಪಿಸಿದರು. ನಾಯಕ ವಿರಾಟ್ ಕೊಹ್ಲಿ ಉತ್ತಮ ಆರಂಭ ಪಡೆದರೂ 42 ರನ್ ಗಳಿಸಿ ಔಟಾದರು.

Share this Story:

Follow Webdunia kannada

ಮುಂದಿನ ಸುದ್ದಿ

ರೋಹಿತ್, ರಾಹುಲ್ ಅರ್ಧಶತಕ: ಉತ್ತಮ ಮೊತ್ತದತ್ತ ಭಾರತ