Select Your Language

Notifications

webdunia
webdunia
webdunia
webdunia

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

KL Rahul
ಮುಂಬೈ: ಭಾರತ ಮತ್ತು ಇಂಗ್ಲೆಂಡ್ ಸರಣಿಯಲ್ಲಿ ಆರಂಭಿಕರಾಗಿ ಸ್ಟಾರ್ ಆಗಿದ್ದ ಕೆಎಲ್ ರಾಹುಲ್ ಗೆ ಏಷ್ಯಾಕಪ್ ಟೂರ್ನಿಯಲ್ಲಿ ಸ್ಥಾನ ಸಿಗುವುದು ಅನುಮಾನವೆನ್ನಲಾಗಿದೆ.

ಈ ಬಾರಿ ಟಿ20 ಮಾದರಿಯಲ್ಲಿ ಏಷ್ಯಾ ಕಪ್ ನಡೆಯಲಿದೆ. ಟಿ20 ಮಾದರಿಯಲ್ಲಿ ಟೀಂ ಇಂಡಿಯಾ ಸಂಪೂರ್ಣ ಯುವ ತಂಡ ಕಣಕ್ಕಿಳಿಯುತ್ತದೆ. ಈ ತಂಡದಲ್ಲಿ ಅನುಭವಿ ಆಟಗಾರರೇ ಇರಲ್ಲ. ಸದ್ಯಕ್ಕೆ ಕೆಎಲ್ ರಾಹುಲ್ ಏಕದಿನ ಮತ್ತು ಟೆಸ್ಟ್ ಮಾದರಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ. ಟಿ20 ಕ್ರಿಕೆಟ್ ನಲ್ಲಿ ಅವರನ್ನು ಕಡೆಗಣಿಸಲಾಗುತ್ತದೆ.

ಇದೀಗ ಐಪಿಎಲ್ ನಲ್ಲಿ, ಇದಾದ ಬಳಿಕ ಇಂಗ್ಲೆಂಡ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಿದ್ದರೂ ಕೆಎಲ್ ರಾಹುಲ್ ಗೆ ಈಗ ಏಷ್ಯಾ ಕಪ್ ನಂತಹ ಪ್ರಮುಖ ಸರಣಿಯಲ್ಲಿ ಅವಕಾಶ ಸಿಗುವುದು ಅನುಮಾನವಾಗಿದೆ.

ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್ ಗಳಾಗಿ ಸಂಜು ಸ್ಯಾಮ್ಸನ್ ಮತ್ತು ಜಿತೇಶ್ ಶರ್ಮಾ ಆಯ್ಕೆಯಾಗಲಿದ್ದಾರೆ. ಕಳೆದ ಒಂದು ವರ್ಷದಿಂದ ಕೆಎಲ್ ರಾಹುಲ್ ರನ್ನು ಟಿ20 ತಂಡಕ್ಕೆ ಪರಿಗಣಿಸುತ್ತಿಲ್ಲ. ಹೀಗಾಗಿ ಈ ಟೂರ್ನಿಗೂ ರಾಹುಲ್ ಆಯ್ಕೆಯಾಗುವುದು ಅನುಮಾನ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ