ಮುಂಬೈ: ಗಾಯದಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿದಿರುವ ಕ್ರಿಕೆಟಿಗ ಕೆಎಲ್ ರಾಹುಲ್ ಈಗ ಜರ್ಮನಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ರಾಹುಲ್, ಚೇತರಿಸಿಕೊಳ್ಳದ ಕಾರಣ ಜರ್ಮನಿಗೆ ಹೆಚ್ಚಿನ ಚಿಕಿತ್ಸೆಗಾಗಿ ತೆರಳಿದ್ದರು. ಇದರಿಂದಾಗಿ ಅವರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯವನ್ನೂ ಮಿಸ್ ಮಾಡಿಕೊಂಡಿದ್ದಾರೆ.
ಈಗ ಜರ್ಮನಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಹುಲ್, ಅಲ್ಲಿನ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಎಲ್ಲರ ಆಶೀರ್ವಾದ ಬೇಕು ಎಂದು ಕೇಳಿಕೊಂಡಿದ್ದಾರೆ.