Webdunia - Bharat's app for daily news and videos

Install App

ಕೆಎಲ್ ರಾಹುಲ್ ಬಗ್ಗೆ ಸೆಹ್ವಾಗ್ ಹೇಳಿದ ಭವಿಷ್ಯ ನಿಜವಾಯ್ತು!

Webdunia
ಬುಧವಾರ, 4 ಜುಲೈ 2018 (08:44 IST)
ನವದೆಹಲಿ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ ಕೆಎಲ್ ರಾಹುಲ್ ಐಪಿಎಲ್ ಆಡುವಾಗ ಮೆಂಟರ್ ಆಗಿದ್ದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಇತ್ತೀಚೆಗೆ ನೀಡಿದ್ದ ಹೇಳಿಕೆಯೊಂದು ನಿಜವಾಗಿದೆ.
 

ರಾಹುಲ್ ರನ್ನು ಐರ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಆಡಿಸದೇ ಇದ್ದಾಗ ಆಕ್ರೋಶ ವ್ಯಕ್ತಪಡಿಸಿದ್ದ ಸೆಹ್ವಾಗ್, ರಾಹುಲ್ ರನ್ನು ಮೂರನೇ ಕ್ರಮಾಂಕದಲ್ಲಿ ಆಡಿಸಿ, ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡಬೇಕು. ರಾಹುಲ್ ಮೂರನೇ ಕ್ರಮಾಂಕದಲ್ಲಿ ಅತ್ಯುತ್ತಮವಾಗಿ ಆಡಬಲ್ಲರು ಎಂದಿದ್ದರು.

ನಿನ್ನೆ ಇಂಗ್ಲೆಂಡ್ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ರಾಹುಲ್ ಮೂರನೇ ಕ್ರಮಾಂಕದಲ್ಲಿ ಇಳಿದು ಅಬ್ಬರಿಸಿದ್ದು ನೋಡಿದರೆ ಸೆಹ್ವಾಗ್ ಭವಿಷ್ಯ ನಿಜವಾಗಿದೆ. ನಿನ್ನೆ ರಾಹುಲ್ ಮೂರನೆಯವರಾಗಿ ಕಣಕ್ಕಿಳಿದರೆ, ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದರು.

ಸೆಹ್ವಾಗ್ ನುಡಿದಂತೇ ರಾಹುಲ್ ಸಿಡಿದರು. ಅದೆಷ್ಟೋ ದಿನಗಳ ನಂತರ ಶತಕವೊಂದನ್ನು ಭಾರಿಸಿದರು. ಎರಡು ವರ್ಷಗಳ ಬಳಿಕ ವಿದೇಶದಲ್ಲಿ ಶತಕ ಸಿಡಿಸಿದ ದಾಖಲೆ ಮಾಡಿದರು. ಅಷ್ಟೇ ಅಲ್ಲದೆ, ಅತೀ ವೇಗವಾಗಿ (13 ಇನಿಂಗ್ಸ್ ಗಳಿಂದ) ಟಿ20 ಕ್ರಿಕೆಟ್ ನಲ್ಲಿ 500 ರನ್ ಗಳಿಸಿದ ದಾಖಲೆ ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments