Webdunia - Bharat's app for daily news and videos

Install App

ಮೂರನೇ ಟೆಸ್ಟ್ ಗೆ ಕೆಎಲ್ ರಾಹುಲ್ ಕಮ್ ಬ್ಯಾಕ್, ಅಯ್ಯರ್ ಗೆ ಗೇಟ್ ಪಾಸ್?

Krishnaveni K
ಸೋಮವಾರ, 5 ಫೆಬ್ರವರಿ 2024 (08:47 IST)
ಮುಂಬೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದ ವೇಳೆ ಕೆಎಲ್ ರಾಹುಲ್ ಫಿಟ್ ಆಗಿ ತಂಡಕ್ಕೆ ಮರಳುವ ಸಾಧ‍್ಯತೆಯಿದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಉಪಯುಕ್ತ ಇನಿಂಗ್ಸ್ ಆಡಿದ್ದ ರಾಹುಲ್ ಎರಡನೇ ಟೆಸ್ಟ್ ಪಂದ್ಯದ ವೇಳೆಗೆ ತೊಡೆ ನೋವಿನಿಂದಾಗಿ ಹೊರಗುಳಿದಿದ್ದರು. ಅವರ ಅನುಪಸ್ಥಿತಿ ಭಾರತದ ಮಧ್ಯಮ ಕ್ರಮಾಂಕಕ್ಕೆ ಕಾಡುತ್ತಿದೆ. ಆದರೆ ಇದೀಗ ಮೂರನೇ ಟೆಸ್ಟ್ ವೇಳೆಗೆ ಅವರು ತಂಡಕ್ಕೆ ಕಮ್ ಬ್ಯಾಕ್ ಮಾಡಲಿದ್ದಾರೆ ಎಂಬ ಸಿಹಿ ಸುದ್ದಿ ಸಿಕ್ಕಿದೆ.

ಕೌಟುಂಬಿಕ ಕಾರಣಗಳಿಂದಾಗಿ ಕೊಹ್ಲಿ ಕಳೆದ ಎರಡೂ ಟೆಸ್ಟ್ ಪಂದ್ಯಗಳನ್ನು ಆಡಿಲ್ಲ. ಅವರು ಮೂರನೇ ಟೆಸ್ಟ್ ಗೂ ಲಭ್ಯರಾಗುವುದು ಅನುಮಾನವೆನ್ನಲಾಗಿದೆ. ಈ ನಡುವೆ ಕೆಎಲ್ ರಾಹುಲ್ ಕಮ್ ‍ಬ್ಯಾಕ್ ಸುದ್ದಿ ತಂಡಕ್ಕೆ ಸಮಾಧಾನ ನೀಡಬಹುದು. ರಾಹುಲ್ ಅನುಪಸ್ಥಿತಿಯಲ್ಲಿ ತಂಡದಲ್ಲಿ ಸ್ಥಾನ ಪಡೆದ ರಜತ್ ಪಟಿದಾರ್ ಕೂಡಾ ಸಿಕ್ಕ ಅವಕಾಶವನ್ನು ಬಳಸಿಕೊಳ್ಳಲು ವಿಫಲರಾಗಿದ್ದರು.

ಶ್ರೇಯಸ್ ಅಯ್ಯರ್ ಗೆ ಕೊಕ್?
ರಾಹುಲ್ ತಂಡಕ್ಕೆ ಬಂದರೆ ತಂಡದಿಂದ ಹೊರ ನಡೆಯುವವರು ಯಾರು ಎಂಬ ಪ್ರಶ್ನೆಯಿದೆ. ರಜತ್ ಪಟಿದಾರ್ ಗೆ ಕಳೆದ ಪಂದ್ಯದಲ್ಲಿ ಮೊದಲ ಬಾರಿಗೆ ಅವಕಾಶ ಸಿಕ್ಕಿತ್ತು. ಆದರೆ ಅವರು ಬಳಸಿಕೊಳ್ಳಲಿಲ್ಲ. ಇತ್ತ ಶ್ರೇಯಸ್ ಸತತ ವೈಫಲ್ಯಕ್ಕೊಳಗಾಗಿದ್ದು ಭಾರೀ ಒತ್ತಡದಲ್ಲಿದ್ದಾರೆ. ಹೀಗಾಗಿ ಅನುಭವಿ ಶ್ರೇಯಸ್ ರನ್ನು ಪಕ್ಕಕ್ಕಿಟ್ಟು ರಜತ್ ಗೆ ಇನ್ನೊಂದು ಅವಕಾಶ ನೀಡಬಹುದೇ ಎಂದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments