Select Your Language

Notifications

webdunia
webdunia
webdunia
webdunia

ಓಪನರ್ ಸ್ಥಾನಕ್ಕೆ ಕೆಎಲ್ ರಾಹುಲ್, ಶುಬ್ಮನ್ ಗಿಲ್ ನಡುವೆ ಫೈಟ್

ಓಪನರ್ ಸ್ಥಾನಕ್ಕೆ ಕೆಎಲ್ ರಾಹುಲ್, ಶುಬ್ಮನ್ ಗಿಲ್ ನಡುವೆ ಫೈಟ್
ನಾಗ್ಪುರ , ಮಂಗಳವಾರ, 7 ಫೆಬ್ರವರಿ 2023 (08:30 IST)
Photo Courtesy: Twitter
ನಾಗ್ಪುರ: ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಬಾರ್ಡರ್-ಗಾವಸ್ಕರ್ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆರಂಭಿಕರು ಯಾರು ಎನ್ನುವ ಪ್ರಶ್ನೆ ಮೂಡಿದೆ.

ಈ ಸರಣಿಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಜೊತೆ ಓಪನರ್ ಆಗಿ ಕಣಕ್ಕಿಳಿಯಲು ಕೆಎಲ್ ರಾಹುಲ್ ಮತ್ತು ಶುಬ್ಮನ್ ಗಿಲ್ ನಡುವೆ ಪೈಪೋಟಿ ಏರ್ಪಟ್ಟಿದೆ. ಇಬ್ಬರೂ ಟೆಸ್ಟ್ ಕ್ರಿಕೆಟ್ ನಲ್ಲಿ ಓಪನರ್ ಆಗಿ ಉತ್ತಮ ದಾಖಲೆ ಹೊಂದಿದ್ದಾರೆ.

ಅದರಲ್ಲೂ ಇತ್ತೀಚೆಗಿನ ದಿನಗಳಲ್ಲಿ ರಾಹುಲ್ ಗೆ ಹೋಲಿಸಿದರೆ ಶುಬ್ಮನ್ ಗಿಲ್ ಅತ್ಯುತ್ತಮ ಫಾರ್ಮ್ ನಲ್ಲಿದ್ದಾರೆ. ಆದರೆ ಅನುಭವಿ ಎನ್ನುವ ನಿಟ್ಟಿನಲ್ಲಿ ನೋಡುವುದಾದರೆ ರಾಹುಲ್ ಮೇಲುಗೈ ಹೊಂದಿದ್ದಾರೆ. ಹೀಗಾಗಿ ಇಬ್ಬರ ನಡುವೆ ಓಪನರ್ ಯಾರಾಗಬಹುದು ಎಂಬ ಕುತೂಹಲವಿದೆ. ಒಂದು ವೇಳೆ ಇಬ್ಬರಿಗೂ ತಂಡದಲ್ಲಿ ಸ್ಥಾನ ನೀಡುವುದಾದರೆ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು. ಆಗ ಶ್ರೇಯಸ್ ಅಯ್ಯರ್ ಸ್ಥಾನಕ್ಕೆ ಆಯ್ಕೆಯಾದ ಸೂರ್ಯಕುಮಾರ್ ಯಾದವ್ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಲು ಮತ್ತಷ್ಟು ಕಾಯಬೇಕಾದೀತು.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಟ್ರೇಲಿಯಾ ಸರಣಿಯಲ್ಲಿ ರಿಷಬ್ ಪಂತ್ ರನ್ನು ಮಿಸ್ ಮಾಡಿಕೊಳ್ಳುತ್ತಿರುವ ಫ್ಯಾನ್ಸ್