Publish Date: Thu, 11 Mar 2021 (09:55 IST)
Updated Date: Thu, 11 Mar 2021 (09:57 IST)
ದುಬೈ: ಐಸಿಸಿ ಲೇಟೆಸ್ಟ್ ಟಿ20 ಶ್ರೇಯಾಂಕದಲ್ಲಿ ಟೀಂ ಇಂಡಿಯಾ 2 ನೇ ಸ್ಥಾನಕ್ಕೆ ಏರಿದ್ದರೆ, ಕ್ರಿಕೆಟಿಗ ಕೆಎಲ್ ರಾಹುಲ್ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಕುಸಿತ ಕಂಡಿದ್ದಾರೆ.
ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದ ಕೆಎಲ್ ರಾಹುಲ್ ಒಂದು ಸ್ಥಾನ ಕುಸಿತ ಕಂಡಿದ್ದು, ಮೂರನೇ ಸ್ಥಾನಕ್ಕಿಳಿದಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.
ಆಸ್ಟ್ರೇಲಿಯಾ ನಾಯಕ ಏರಾನ್ ಫಿಂಚ್ ಎರಡನೇ ಸ್ಥಾನಕ್ಕೆ ಏರಿಕೆಯಾಗಿದ್ದಾರೆ. ಇಂಗ್ಲೆಂಡ್ ನ ಡೇವಿಡ್ ಮಲನ್ ನಂ.1 ಟಿ20 ಬ್ಯಾಟ್ಸ್ ಮನ್ ಆಗಿದ್ದಾರೆ. ಇನ್ನು ಬೌಲರ್ ಗಳ ಪಟ್ಟಿಯಲ್ಲಿ ರಶೀದ್ ಖಾನ್ ನಂ.1 ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಭಾರತದ ಯಾವುದೇ ಬೌಲರ್ ಟಾಪ್ 10 ರೊಳಗೆ ಸ್ಥಾನ ಪಡೆದಿಲ್ಲ. ಆಲ್ ರೌಂಡರ್ ಗಳ ಪಟ್ಟಿಯಲ್ಲೂ ಭಾರತಕ್ಕೆ ಸ್ಥಾನವಿಲ್ಲ.