Publish Date: Tue, 19 Jul 2022 (08:40 IST)
Updated Date: Tue, 19 Jul 2022 (09:00 IST)
ಬೆಂಗಳೂರು: ಶಸ್ತ್ರಚಿಕಿತ್ಸೆಗೊಳಗಾದ ಬಳಿಕ ಮತ್ತೆ ಕ್ರಿಕೆಟ್ ಕಣಕ್ಕೆ ಮರಳಲು ಕ್ರಿಕೆಟಿಗ ಕೆಎಲ್ ರಾಹುಲ್ ಸಿದ್ಧತೆ ನಡೆಸಿದ್ದಾರೆ.
ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿ ಚೇತರಿಸಿಕೊಳ್ಳುತ್ತಿರುವ ರಾಹುಲ್ ಈಗ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಅವರು ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ.
ವೆಸ್ಟ್ ಇಂಡೀಸ್ ನಡೆಯಲಿರುವ ಟಿ20 ಸರಣಿಗೆ ಕೆಎಲ್ ರಾಹುಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹಾಗಿದ್ದರೂ ಅದಕ್ಕೆ ಮೊದಲು ಅವರು ಫಿಟ್ನೆಸ್ ಸಾಬೀತುಪಡಿಸಿದರೆ ಮಾತ್ರ ತಂಡದ ಜೊತೆ ಪ್ರಯಾಣ ಬೆಳೆಸಲಿದ್ದಾರೆ. ಹೀಗಾಗಿ ಇದಕ್ಕೂ ಮೊದಲು ಫಿಟ್ ಆಗಲು ರಾಹುಲ್ ಅಭ್ಯಾಸ ಆರಂಭಿಸಿದ್ದಾರೆ.