Select Your Language

Notifications

webdunia
webdunia
webdunia
webdunia

ಭಾರತ-ಆಫ್ರಿಕಾ ಟೆಸ್ಟ್: ವಿರಾಟ್ ಕೊಹ್ಲಿ ಔಟ್, ಕೆಎಲ್ ರಾಹುಲ್ ನಾಯಕ!

ಭಾರತ-ಆಫ್ರಿಕಾ ಟೆಸ್ಟ್: ವಿರಾಟ್ ಕೊಹ್ಲಿ ಔಟ್, ಕೆಎಲ್ ರಾಹುಲ್ ನಾಯಕ!
ಜೊಹಾನ್ಸ್ ಬರ್ಗ್ , ಸೋಮವಾರ, 3 ಜನವರಿ 2022 (13:27 IST)
ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ.

ವಿರಾಟ್ ಕೊಹ್ಲಿ ಬೆನ್ನು ನೋವಿನಿಂದಾಗಿ ಆಡುವ ಬಳಗದಿಂದ ಹೊರಗುಳಿದಿದ್ದಾರೆ. ಹೀಗಾಗಿ ಉಪನಾಯಕ ರಾಹುಲ್ ಮೊದಲ ಬಾರಿಗೆ ಟೆಸ್ಟ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಸೀಮಿತ ಓವರ್ ಗಳ ನಾಯಕನಾಗುವ ಮೊದಲೇ ಟೆಸ್ಟ್ ಕ್ರಿಕೆಟ್ ನಲ್ಲಿ ನಾಯಕನಾದ ದಾಖಲೆಯನ್ನು ರಾಹುಲ್ ಮಾಡಿದ್ದಾರೆ. ಇದಕ್ಕೆ ಮೊದಲು ಮೊಹಮ್ಮದ್ ಅಜರುದ್ದೀನ್ ಇದೇ ದಾಖಲೆ ಮಾಡಿದ್ದರು.

ಇನ್ನು ತಂಡದ ವಿಚಾರಕ್ಕೆ ಬಂದರೆ ಕೊಹ್ಲಿ ಸ್ಥಾನದಲ್ಲಿ ಹನುಮ ವಿಹಾರಿಗೆ ಅವಕಾಶ ನೀಡಲಾಗಿದೆ. ಉಳಿದಂತೆ ಕಳೆದ ಪಂದ್ಯದಲ್ಲಿ ಆಡಿದ್ದ ತಂಡವನ್ನೇ ಕಣಕ್ಕಿಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ದ.ಆಫ್ರಿಕಾ ಕ್ರಿಕೆಟ್ ಗೆ ಇಂದಿನ ಪಂದ್ಯ ಸ್ಪೆಷಲ್ ಯಾಕೆ ಗೊತ್ತಾ?