ನಾಗ್ಪುರ: ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ನೀರಸ ಪ್ರದರ್ಶನ ನೀಡಿದ ಕೆಎಲ್ ರಾಹುಲ್ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗಿದ್ದಾರೆ.
ರಾಹುಲ್ ಮೊದಲ ಟೆಸ್ಟ್ ಗೆಲುವಿನ ಬಳಿಕ ಇನ್ ಸ್ಟಾಗ್ರಾಂನಲ್ಲಿ ಫೋಟೋ ಪ್ರಕಟಿಸಿ ಖುಷಿ ವ್ಯಕ್ತಪಡಿಸಿದ್ದರು. ಇದಕ್ಕೆ ಕಾಮೆಂಟ್ ಮಾಡಿರುವ ನೆಟ್ಟಿಗರು ನೀವೂ ಇದ್ರಾ ತಂಡದಲ್ಲಿ ಎಂದು ಟ್ರೋಲ್ ಮಾಡಿದ್ದಾರೆ.
ರಾಹುಲ್ ಆರಂಭಿಕರಾಗಿ ಕಣಕ್ಕಿಳಿದು 71 ಎಸೆತ ಎದುರಿಸಿ ಗಳಿಸಿದ್ದು ಕೇವಲ 20 ರನ್. ಹೀಗಾಗಿ ಅವರ ಬದಲು ಇನ್ ಫಾರ್ಮ್ ಬ್ಯಾಟಿಗ ಶುಬ್ಮನ್ ಗಿಲ್ ಗೆ ಅವಕಾಶ ನೀಡಬೇಕಿತ್ತು ಎಂದು ಮಾಜಿ ಕ್ರಿಕೆಟಿಗರು, ಫ್ಯಾನ್ಸ್ ಕಿಡಿ ಕಾರಿದ್ದರು. ಇದರ ಬೆನ್ನಲ್ಲೇ ರಾಹುಲ್ ಗೆಲುವಿನ ಖುಷಿ ಹಂಚಿಕೊಂಡಿದ್ದಕ್ಕೆ, ಇನ್ನಾದರೂ ಕೊಂಚ ರನ್ ಗಳಿಸಿ, ಇಲ್ಲವೇ ಗಿಲ್ ಗೆ ಅವಕಾಶ ನೀಡಿ ಎಂದು ಟ್ರೋಲ್ ಮಾಡಿದ್ದಾರೆ.