Publish Date: Thu, 28 Oct 2021 (09:44 IST)
Updated Date: Thu, 28 Oct 2021 (09:46 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಅರ್ಧಶತಕ ಭಾರಿಸಿದ ಹೊರತಾಗಿಯೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ.
ಕೊಹ್ಲಿ ಜೊತೆಗೆ ಟೀಂ ಇಂಡಿಯಾ ಆರಂಭಿಕ ಕೆಎಲ್ ರಾಹುಲ್ ಕೂಡಾ ಎರಡು ಸ್ಥಾನ ಹಿನ್ನಡೆ ಅನುಭವಿಸಿದ್ದಾರೆ. ಕೊಹ್ಲಿ ಒಂದು ಸ್ಥಾನ ಕೆಳಕ್ಕೆ ಜಾರಿದ್ದು, 725 ಅಂಕಗಳೊಂದಿಗೆ 5 ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಅತ್ತ ರಾಹುಲ್ ಎರಡು ಸ್ಥಾನ ಕೆಳಕ್ಕಿಳಿದು 8 ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ರಾಹುಲ್ ಟಿ20 ವಿಶ್ವಕಪ್ ನ ಮೊದಲ ಪಂದ್ಯದಲ್ಲಿ ಕಳಪೆ ಮೊತ್ತಕ್ಕೆ ಔಟಾಗಿದ್ದರು. ಇಂಗ್ಲೆಂಡ್ ನ ಡೇವಿಡ್ ಮಲನ್ ಮತ್ತು ಪಾಕಿಸ್ತಾನ ನಾಯಕ ಬಾಬರ್ ಅಜಮ್ ಮೊದಲ ಎರಡು ಸ್ಥಾನದಲ್ಲಿದ್ದಾರೆ.