ಬೆಂಗಳೂರು: ಫಿಟ್ನೆಸ್ ಪರೀಕ್ಷೆ ಪಾಸು ಮಾಡಿಕೊಂಡು ಏಷ್ಯಾ ಕಪ್ ಆಡುತ್ತಿರುವ ಟೀಂ ಇಂಡಿಯಾವನ್ನು ಕೂಡಿಕೊಳ್ಳುವ ಮೊದಲು ಕ್ರಿಕೆಟಿಗ ಕೆಎಲ್ ರಾಹುಲ್ ಪತ್ನಿ ಸಮೇತರಾಗಿ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಗಾಯದ ಸಮಸ್ಯೆಯಿಂದಾಗಿ ರಾಹುಲ್ ಹಲವು ದಿನಗಳಿಂದ ಕ್ರಿಕೆಟ್ ನಿಂದ ದೂರವಿದ್ದಾರೆ. ಈಗ ಏಷ್ಯಾ ಕಪ್ ಮೂಲಕ ಮತ್ತೆ ಸಕ್ರಿಯ ಕ್ರಿಕೆಟ್ ಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಟೆಂಪಲ್ ರನ್ ನಡೆಸಿದ್ದಾರೆ. ಪತ್ನಿ ಅಥಿಯಾ ಜೊತೆ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಇದಕ್ಕೂ ಮೊದಲೂ ರಾಹುಲ್ ಫಾರ್ಮ್ ಸಮಸ್ಯೆಗೊಳಗಾಗಿದ್ದಾಗ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದ್ದರು. ಇದೀಗ ಮತ್ತೆ ದೇವರ ದರ್ಶನ ಪಡೆದಿದ್ದಾರೆ.