Publish Date: Thu, 25 Aug 2022 (10:00 IST)
Updated Date: Thu, 25 Aug 2022 (10:03 IST)
ದುಬೈ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಪಾಕ್ ನಾಯಕ ಬಾಬರ್ ಅಜಮ್ ಅಭ್ಯಾಸದ ವೇಳೆ ಮುಖಾಮುಖಿಯಾಗಿರುವ ವಿಡಿಯೋ ಈಗ ವೈರಲ್ ಆಗಿದೆ.
ಪ್ರಸಕ್ತಿ ಕ್ರಿಕೆಟ್ ನಲ್ಲಿ ಇಬ್ಬರೂ ರನ್ ಗಳಿಸುವ ವಿಚಾರದಲ್ಲಿ ಪೈಪೋಟಿಯಲ್ಲಿದ್ದಾರೆ. ಒಬ್ಬರಿಗೊಬ್ಬರನ್ನು ಹೋಲಿಕೆ ಮಾಡಲಾಗುತ್ತದೆ. ಇದೀಗ ಏಷ್ಯಾ ಕಪ್ ನಲ್ಲಿ ಭಾರತ-ಪಾಕಿಸ್ತಾನ ಮೊದಲ ಪಂದ್ಯದಲ್ಲೇ ಮುಖಾಮುಖಿಯಾಗಲಿದ್ದು, ಈ ಪಂದ್ಯಕ್ಕೆ ಎರಡೂ ತಂಡಗಳು ಅಭ್ಯಾಸ ನಡೆಸುವಾಗ ಇಬ್ಬರು ಕ್ರಿಕೆಟ್ ದಿಗ್ಗಜರು ಪರಸ್ಪರ ಭೇಟಿಯಾಗಿದ್ದಾರೆ.
ಕೊಹ್ಲಿ ಮತ್ತು ಬಾಬರ್ ಪರಸ್ಪರ ಕೈಕುಲುಕಿ ಉಭಯ ಕುಶಲೋಪರಿ ನಡೆಸುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.