Publish Date: Sat, 21 Aug 2021 (10:30 IST)
Updated Date: Sat, 21 Aug 2021 (10:37 IST)
ಲಂಡನ್: ಮುಂಬರುವ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ತಂಡದ ಆಯ್ಕೆ ಮಾಡುವ ಬಗ್ಗೆ ಬಿಸಿಸಿಐ ಅಧಿಕಾರಿಗಳು ನಾಯಕ ಕೊಹ್ಲಿ ಜೊತೆ ಮಹತ್ವದ ಸಭೆ ನಡೆಸಿದ್ದಾರೆ ಎನ್ನಲಾಗಿದೆ.
ಅಕ್ಟೋಬರ್ ನಲ್ಲಿ ಯಎಇನಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಇದಕ್ಕೆ ಟೀಂ ಇಂಡಿಯಾ ಆಟಗಾರರ ಆಯ್ಕೆ ಕುರಿತು ಕೊಹ್ಲಿ ಜೊತೆ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ.
ಲಂಡನ್ ನಲ್ಲಿರುವ ಬಿಸಿಸಿಐ ಅಧಿಕಾರಿಗಳು ಕೊಹ್ಲಿ ಜೊತೆ ಸಮಾಲೋಚನೆ ನಡೆಸಿದ್ದಾರೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ತಂಡದ ಆಯ್ಕೆ ನಡೆಯುವ ಸಾಧ್ಯತೆಯಿದೆ. ಬಿಸಿಸಿಐ ಅಧ್ಯಕ್ಷ ಗಂಗೂಲಿ, ಕಾರ್ಯದರ್ಶಿ ಜಯ್ ಶಾ, ಉಪಾಧ್ಯಕ್ಷ ರಾಜೀವ್ ಶುಕ್ಲಾ ಈ ಮೀಟಿಂಗ್ ನಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.