Publish Date: Mon, 30 Oct 2023 (08:30 IST)
Updated Date: Mon, 30 Oct 2023 (08:49 IST)
ಲಕ್ನೋ: ಇಂಗ್ಲೆಂಡ್ ವಿರುದ್ಧ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಬೇಡದ ದಾಖಲೆಯೊಂದನ್ನು ಮಾಡಿದ್ದಾರೆ.
ಕೊಹ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರ ಅನೇಕ ದಾಖಲೆಗಳನ್ನು ಮುರಿದಿದ್ದಾರೆ. ಇದೀಗ ಡಕೌಟ್ ವಿಚಾರದಲ್ಲೂ ಕೊಹ್ಲಿ ಸಚಿನ್ ದಾಖಲೆ ಸರಿಗಟ್ಟಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 9 ಎಸೆತ ಎದುರಿಸಿದ ಕೊಹ್ಲಿ ಶೂನ್ಯಕ್ಕೆ ನಿರ್ಗಮಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಬಾರಿ ಡಕೌಟ್ ಆದ ಸಚಿನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಸಚಿನ್ 34 ಬಾರಿ ಡಕೌಟ್ ಆಗಿದ್ದರು. ಇದೀಗ ಕೊಹ್ಲಿ ಕೂಡಾ ಅಷ್ಟೇ ಬಾರಿ ಡಕೌಟ್ ಆದಂತಾಗಿದೆ.