ದುಬೈ: ಟಿ20 ವಿಶ್ವಕಪ್ ನಲ್ಲಿ ಸ್ಕಾಟ್ ಲೆಂಡ್ ವಿರುದ್ಧ ಭರ್ಜರಿ ಜಯ ಗಳಿಸಿದ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರವಿಚಂದ್ರನ್ ಅಶ್ವಿನ್ ಸೇರಿದಂತೆ ಹಿರಿಯ ಆಟಗಾರರು ಎದುರಾಳಿಗಳಿಗೆ ಸ್ಪೂರ್ತಿ ತುಂಬುವ ಕೆಲಸ ಮಾಡಿದ್ದಾರೆ.
ಸೋತು ಬೇಸರದಲ್ಲಿದ್ದ ಸ್ಕಾಟ್ ಲೆಂಡ್ ಆಟಗಾರರ ಡ್ರೆಸ್ಸಿಂಗ್ ರೂಂಗೆ ತೆರಳಿದ ಕೊಹ್ಲಿ, ರಾಹುಲ್, ಅಶ್ವಿನ್ ಯುವ ಆಟಗಾರರಿಗೆ ತಮ್ಮ ಅನುಭವದ ಟಿಪ್ಸ್ ನೀಡಿದ್ದಾರೆ.
ಸ್ಕಾಟ್ ಲೆಂಡ್ ಆಟಗಾರರಿಗೆ ಕೊಹ್ಲಿ ಮಾಸ್ಟರ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದಕ್ಕೂ ಮೊದಲು ಪಾಕಿಸ್ತಾನ ವಿರುದ್ಧ ಸೋತ ಬಳಿಕವೂ ಟೀಂ ಇಂಡಿಯಾ ಆಟಗಾರರು ಎದುರಾಳಿಗಳ ಜೊತೆ ನಡೆದುಕೊಂಡ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು.