Publish Date: Sat, 19 Feb 2022 (17:11 IST)
Updated Date: Sat, 19 Feb 2022 (17:13 IST)
ಮುಂಬೈ: ಶ್ರೀಲಂಕಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟಿಲಾಗಿದ್ದು, ವಿರಾಟ್ ಕೊಹ್ಲಿ, ರಿಷಬ್ ಪಂತ್ ಗೆ ವಿಶ್ರಾಂತಿ ನೀಡಲಾಗಿದೆ.
ರಿಷಬ್ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ ವಿಕೆಟ್ ಕೀಪರ್ ಆಗಿ ಆಡಲಿದ್ದಾರೆ. ಇನ್ನು, ಗಾಯದ ಕಾರಣದಿಂದ ಬಹಳ ದಿನಗಳಿಂದ ತಂಡದಿಂದ ಹೊರಗುಳಿದಿದ್ದ ರವೀಂದ್ರ ಜಡೇಜಾ ಕಮ್ ಬ್ಯಾಕ್ ಮಾಡಿದ್ದಾರೆ.
ಉಳಿದಂತೆ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಋತುರಾಜ್ ಗಾಯಕ್ ವಾಡ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಜಸ್ಪ್ರೀತ್ ಬುಮ್ರಾ (ಉಪನಾಯಕ), ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಯಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಆವೇಶ್ ಖಾನ್.