ನವದೆಹಲಿ: ದ.ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿ ಏಕದಿನದಲ್ಲಿ ಅತ್ಯಧಿಕ ಶತಕ ಗಳಿಸಿದ ಸಚಿನ್ ದಾಖಲೆಯನ್ನು ಸರಿಗಟ್ಟಿ ವಿಶ್ವದಾಖಲೆ ಮಾಡಿದ್ದಾರೆ.
ಬಾಂಗ್ಲಾದೇಶ ವಿರುದ್ಧ ಇಂದು ಪಂದ್ಯ ನಡೆಯಲಿರುವ ಹಿನ್ನಲೆಯಲ್ಲಿ ಶ್ರೀಲಂಕಾ ನಾಯಕ ಕುಸಲ್ ಮೆಂಡಿಸ್ ಗೆ ಕೊಹ್ಲಿ ವಿಶ್ವದಾಖಲೆಯ ಶತಕ ಸಿಡಿಸಿದ್ದಾರೆ. ಈ ಬಗ್ಗೆ ಏನು ಹೇಳಲು ಬಯಸುತ್ತೀರಿ ಎಂದು ಪತ್ರಕರ್ತರೊಬ್ಬರು ಪ್ರಶ್ನಿಸಿದ್ದಾರೆ.
ಈ ಪ್ರಶ್ನೆ ಮೆಂಡಿಸ್ ಗೆ ಕಿರಿ ಕಿರಿ ಉಂಟು ಮಾಡಿದೆ. ಕೊಹ್ಲಿ ಶತಕ ಗಳಿಸಿದರೆ ನಾನೇನು ಹೇಳಬೇಕು? ಅವರಿಗೆ ನಾನೇಕೆ ವಿಶ್ ಮಾಡಬೇಕು? ಎಂದು ಮೆಂಡಿಸ್ ಅಸಮಾಧಾನದಿಂದಲೇ ಉತ್ತರಿಸಿದ್ದಾರೆ.