ಸಿಡ್ನಿಯಲ್ಲಿ ಆಸ್ಟ್ರೇಲಿಯಾ ಓಪನ್ ಸೂಪರ್ ಸೀರೀಸ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಭಾರತ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಅವರ ಆಕ್ರಮಣಕಾರಿ ಮನೋಭಾವದಿಂದ ಸ್ಫೂರ್ತಿ ಪಡೆಯುತ್ತಿದ್ದಾರೆಯೇ? ತಾವು ವಿರಾಟ್ ಕೊಹ್ಲಿ ರೀತಿಯಲ್ಲಿ ಆಕ್ರಮಣಕಾರಿಯಾಗಿ ಆಡಲು ಬಯಸುವುದಾಗಿ ಸೈನಾ ಹೇಳಿಕೊಂಡಿದ್ದಾರೆ.
26 ವರ್ಷದ ಹೈದರಾಬಾದ್ ಆಟಗಾರ್ತಿ ಚೀನಾದ ಸುನ್ ಯು ಅವರನ್ನು ಫೈನಲ್‌ನಲ್ಲಿ ಸೋಲಿಸಿ ರಿಯೊ ಒಲಿಂಪಿಕ್ಸ್‌ಗೆ ಮುನ್ನ ಸೀಸನ್ ಮೊದಲ ಪ್ರಶಸ್ತಿಯನ್ನು ಬಾಚಿಕೊಂಡಿದ್ದರು.
ಸೈನಾ ಗೆಲುವಿಗೆ ಬಾಲಿವುಡ್ ಸ್ಟಾರ್ ಅಮಿತಾಬ್ ಬಚ್ಚನ್ ಅವರಿಂದ ಹಿಡಿದು ಕ್ರೀಡಾ ಕಣ್ಮಣಿಗಳಾದ ಕೊಹ್ಲಿ ಕೂಡ ಅವರ ಸಾಧನೆಗೆ ಅಭಿನಂದಿಸಿದ್ದರು. ಕೊಹ್ಲಿ ಟ್ವಿಟರ್ ಪುಟದಲ್ಲಿ ಸೈನಾ ಸಾಧನೆಗೆ ಅಭಿನಂದನೆ ಸಲ್ಲಿಸಿದಾಗ, ಸೈನಾ ಅದಕ್ಕೆ ಉತ್ತರಿಸಿ ಹೆಚ್ಚು ಪಂದ್ಯಗಳನ್ನು ಗೆಲ್ಲಲು ನಿಮ್ಮ ರೀತಿ ಆಕ್ರಮಣಕಾರಿ ಆಡವಾಡಲು ಬಯಸುತ್ತೇನೆ. ಅದಕ್ಕಾಗಿ ತುಂಬಾ ಪ್ರಯತ್ನಿಸುತ್ತಿದ್ದೇನೆ, ಧನ್ಯವಾದಗಳು ಎಂದು ಉತ್ತರಿಸಿದ್ದಾರೆ.
ಸೈನಾ 2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತರಾಗಿದ್ದು, ಆಗಸ್ಟ್‌ನಲ್ಲಿ ನಡೆಯುವ ರಿಯೋ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಭಾರತದ ಆಸೆಯನ್ನು ಜೀವಂತವಿರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ