Webdunia - Bharat's app for daily news and videos

Install App

ಕೆಎಲ್ ರಾಹುಲ್ ಭವಿಷ್ಯದ ಬಗ್ಗೆ ಸಂಜೀವ್ ಗೊಯೆಂಕಾ ಮಹತ್ವದ ಹೇಳಿಕೆ

Krishnaveni K
ಗುರುವಾರ, 29 ಆಗಸ್ಟ್ 2024 (12:12 IST)
ನವದೆಹಲಿ: ಮುಂದಿನ ಐಪಿಎಲ್ ಗೆ ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿರಲಿದ್ದಾರೆಯೇ ಎಂಬ ಪ್ರಶ್ನೆಗೆ ಲಕ್ನೋ ಮಾಲಿಕ ಸಂಜೀವ್ ಗೊಯೆಂಕಾ ಸ್ಪಷ್ಟನೆ ನೀಡಿದ್ದಾರೆ.

ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಸಂಜೀವ್ ಗೊಯೆಂಕಾ ಮುಂದಿನ ಐಪಿಎಲ್ ಗೆ ರಾಹುಲ್ ರನ್ನು ಉಳಿಸಿಕೊಳ್ಳಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ್ದು, ಕೆಎಲ್ ನಮ್ಮ ತಂಡದ ಅವಿಭಾಜ್ಯ ಅಂಗ ಎಂದಿದ್ದಾರೆ. ಆ ಮೂಲಕ ರಾಹುಲ್ ಮುಂದಿನ ಐಪಿಎಲ್ ಗೂ ಲಕ್ನೋದಲ್ಲಿಯೇ ಉಳಿದುಕೊಳ್ಳಲಿರುವುದು ಪಕ್ಕಾ ಆಗಿದೆ.
 
ಆದರೆ ರಾಹುಲ್ ರನ್ನು ನಾಯಕರಾಗಿ ಮುಂದುವರಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಅವರು ಸ್ಪಷ್ಟ ಉತ್ತರ ನೀಡಲಿಲ್ಲ. ನಾಯಕತ್ವದ  ಬಗ್ಗೆ ನಾವಿನ್ನೂ ನಿರ್ಧಾರ ಕೈಗೊಂಡಿಲ್ಲ ಎಂದಿದ್ದಾರೆ. ಹೀಗಾಗಿ ಮುಂದಿನ ಸೀಸನ್ ನಲ್ಲಿ ರಾಹುಲ್ ಲಕ್ನೋ ತಂಡದಲ್ಲಿ ಮುಂದುವರಿದರೂ ನಾಯಕರಾಗಿ ಮುಂದುವರಯುವುದು ಅನುಮಾನ ಎನ್ನಲಾಗಿದೆ.

ಇದಕ್ಕೆ ಮೊದಲು ರಾಹುಲ್ ಮೊನ್ನೆ ಸಂಜೀವ್ ಗೊಯೆಂಕಾರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಲಕ್ನೋದಲ್ಲಿಯೇ ಉಳಿದುಕೊಳ್ಳಲು ಬಯಸುವುದಾಗಿ ಸಂದೇಶ ನೀಡಿದ್ದರು. ಕಳೆದ ಸೀಸನ್ ನಲ್ಲಿ ರಾಹುಲ್ ಮೇಲೆ ಸಂಜೀವ್ ಮೈದಾನದಲ್ಲಿಯೇ ಅಸಮಾಧಾನ ವ್ಯಕ್ತಪಡಿಸಿದ್ದರಿಂದ ಈ ಸೀಸನ್ ನಲ್ಲಿ ರಾಹುಲ್ ಲಕ್ನೋ ತೊರೆಯಬಹುದು ಎಂಬ ಮಾತು ಕೇಳಿಬರುತ್ತಿತ್ತು. ಆದರೆ ಈಗ ಎಲ್ಲದಕ್ಕೂ ತೆರೆ ಬಿದ್ದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments