Webdunia - Bharat's app for daily news and videos

Install App

ಕೆಎಲ್ ರಾಹುಲ್ ಗೆ ಮತ್ತೆ ಅವಮಾನ ಮಾಡಿದ ಲಕ್ನೋ ಮಾಲಿಕ ಸಂಜಯ್ ಗೊಯೆಂಕಾ

Krishnaveni K
ಶುಕ್ರವಾರ, 1 ನವೆಂಬರ್ 2024 (11:02 IST)
Photo Credit: X
ಲಕ್ನೋ: ಐಪಿಎಲ್ ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲಿಕ ಸಂಜಯ್ ಗೊಯೆಂಕಾ ಮತ್ತೆ ಕನ್ನಡಿಗ ಕೆಎಲ್ ರಾಹುಲ್ ಗೆ ಅವಮಾನ ಮಾಡಿದ್ದಾರೆ. ರಾಹುಲ್ ಲಕ್ನೋ ತಂಡದಿಂದ ರಿಲೀಸ್ ಆಗಲಿದ್ದಾರೆ ಎಂಬ ಸುದ್ದಿಗಳ ನಡುವೆಯೇ ಅವರು ಅವಮಾನಿಸಿದ್ದಾರೆ.

ಈ ಬಾರಿ ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಲಕ್ನೋ ತಂಡ ನಾಯಕ ಕೆಎಲ್ ರಾಹುಲ್ ರನ್ನು ಕೈ ಬಿಡಲಿದೆ ಎಂಬ ಸುದ್ದಿ ದಟ್ಟವಾಗಿದೆ. ಕಳೆದ ಬಾರಿ ರಾಹುಲ್ ನಾಯಕತ್ವದ ಶೈಲಿ ಮಾಲಿಕ ಸಂಜಯ್ ಅಸಮಾಧಾನಕ್ಕೆ ಕಾರಣವಾಗಿತ್ತು. ಮೈದಾನದಲ್ಲಿಯೇ ರಾಹುಲ್ ಮೇಲೆ ಅವರು ಬೈದಾಡಿದ್ದರು.

ಹೀಗಾಗಿ ಈ ಬಾರಿ ರಾಹುಲ್ ಬೇರೆ ತಂಡ ಕೂಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಮೂಲಗಳ ಪ್ರಕಾರ ರಾಹುಲ್ ಆರ್ ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂಬ ಸುದ್ದಿಯಿದೆ. ಇದರ ಬೆನ್ನಲ್ಲೇ ಸಂಜಯ್ ಗೊಯೆಂಕಾ ಕೆಎಲ್ ರಾಹುಲ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

‘ನಮಗೆ ತಂಡಕ್ಕಾಗಿ ಆಡುವ ಮತ್ತು ಗೆಲ್ಲುವ ಮನಸ್ಥಿತಿಯ ಆಟಗಾರರು ಬೇಕು. ಸ್ವ ಹಿತಾಸಕ್ತಿಗೆ ಆಡುವ ಆಟಗಾರರನ್ನು ತಂಡದಲ್ಲಿ ಇಟ್ಟುಕೊಳ್ಳಲು ಬಯಸುವುದಿಲ್ಲ’ ಎಂದಿದ್ದಾರೆ. ಇದು ರಾಹುಲ್ ಕುರಿತಾಗಿಯೇ ನೀಡಿರುವ ಹೇಳಿಕೆ ಎನ್ನಲಾಗಿದ್ದು ಅಭಿಮಾನಿಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments