ಮಂದಾನ ಅತಿ ವೇಗದ ಶತಕ ದಾಖಲೆ: ಭಾರತದ ಬ್ಯಾಟಿಂಗ್‌ ಅಬ್ಬರಕ್ಕೆ ಐರ್ಲೆಂಡ್‌ ತಬ್ಬಿಬ್ಬು

Sampriya
ಬುಧವಾರ, 15 ಜನವರಿ 2025 (14:50 IST)
Photo Courtesy X
ರಾಜ್‌ಕೋಟ್‌: ಇಲ್ಲಿನ ನಿರಂಜನ್ ಶಾ ಸ್ಟೇಡಿಯಂನಲ್ಲಿ ಐರ್ಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ಹಂಗಾಮಿ ನಾಯಕಿ ಸ್ಮೃತಿ ಮಂದಾನ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಭಾರತದ ಪರ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗದ ಸೆಂಚರಿ ಸಿಡಿಸಿದ ದಾಖಲೆಗೆ ಅವರು ಪಾತ್ರವಾಗಿದ್ದಾರೆ.

ಐರ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ.  ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಸ್ಮೃತಿ ಮಂಧಾನ ಹಾಗೂ ಪ್ರತೀಕಾ ರಾವಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಒಂದೆಡೆ ಪ್ರತೀಕಾ ಎಚ್ಚರಿಕೆಯ ಬ್ಯಾಟಿಂಗ್​ ಪ್ರದರ್ಶಿಸಿದರೆ, ಮತ್ತೊಂದೆಡೆ ಸ್ಮೃತಿ ಮಂದಾನ ಸ್ಪೋಟಕ ಇನಿಂಗ್ಸ್ ಕಟ್ಟಿದರು.

ಬಿರುಸಿನ ಬ್ಯಾಟಿಂಗ್​ನೊಂದಿಗೆ ಐರ್ಲೆಂಡ್ ಬೌಲರ್​​ಗಳ ಬೆಂಡೆತ್ತಿದ ಸ್ಮೃತಿ ಕೇವಲ 70 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತೀ ವೇಗದ ಶತಕ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಹೆಸರಿನಲ್ಲಿತ್ತು. 2024 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ ಕೇವಲ 87 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದರು. ಆ ದಾಖಲೆಯನ್ನು ಮಂದಾನ ಮುರಿದರು.

ಇದೀಗ ಈ ದಾಖಲೆಯನ್ನು ಮುರಿದು ಸ್ಮೃತಿ ಮಂಧಾನ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ 80 ಎಸೆತಗಳನ್ನು ಎದುರಿಸಿದ ಸ್ಮೃತಿ 7 ಭರ್ಜರಿ ಸಿಕ್ಸ್ ಹಾಗೂ 12 ಫೋರ್​​ಗಳೊಂದಿಗೆ 135 ರನ್ ಬಾರಿಸಿ ಔಟಾದರು.  

ಉತ್ತಮ ಲಯದಲ್ಲಿರುವ ಪ್ರತೀಕಾ ರಾವಳ್‌ 154 ರನ್‌ ಚಚ್ಚಿದರು. ಮಂದಾನ ಮತ್ತು ರಾವಳ್‌ ಮೊದಲ ವಿಕೆಟ್‌ಗೆ 233 ರನ್‌ ಸೇರಿಸಿ ಮತ್ತೊಂದು ದಾಖಲೆ ಬರೆದರು.   50 ಓವರ್‌ಗಳಲ್ಲಿ ಭಾರತ ತಂಡವು 5 ವಿಕೆಟ್‌ಗೆ 435 ರನ್‌ ಗಳಿಸಿ ಮತ್ತೊಂದು ದಾಖಲೆ ನಿರ್ಮಿಸಿದೆ.
 <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಲಂಡನ್ ವಿಮಾನವೇರಿದ್ದ ಕೊಹ್ಲಿ ಇಂದು ಮತ್ತೆ ಬಂದ್ರು

IND vs WI: ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್

IND vs WI: ಬೇಗ ಆಟ ಮುಗಿಸಿ ಆಸ್ಟ್ರೇಲಿಯಾಕ್ಕೆ ಪ್ಯಾಕಪ್ ಮಾಡಲಿರುವ ಟೀಂ ಇಂಡಿಯಾ

Video: ಬೀಳಬಾರದ ಜಾಗಕ್ಕೆ ಚೆಂಡಿನ ಏಟು: ಅಯ್ಯೋ ಕೆಎಲ್ ರಾಹುಲ್ ಅವಸ್ಥೆ ನೋಡಿ

IND vs WI TEST: ಇನ್ನಿಂಗ್ಸ್‌ ಸೋಲು ತಪ್ಪಿಸಿ ಭಾರತಕ್ಕೆ 121 ರನ್ ಗುರಿ ನೀಡಿದ ವೆಸ್ಟ್‌ ಇಂಡೀಸ್‌

ಮುಂದಿನ ಸುದ್ದಿ
Show comments