Publish Date: Thu, 10 Oct 2019 (14:59 IST)
Updated Date: Thu, 10 Oct 2019 (15:08 IST)
ಪುಣೆ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್ ಮತ್ತೊಂದು ಶತಕ ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದ್ದಾರೆ.
ಇಂದು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಆರಂಭದಲ್ಲಿಯೇ ರೋಹಿತ್ ಶರ್ಮಾರನ್ನು ಕಳೆದುಕೊಂಡಿತು. ಹೀಗಾಗಿ ನಿಧಾನಗತಿಯ ಬ್ಯಾಟಿಂಗ್ ಮಾಡಿದ ಭಾರತದ ಪರ ಚೇತೇಶ್ವರ ಪೂಜಾರ 58 ರನ್ ಗಳಿಸಿ ಔಟಾದರು.
ಆದರೆ ಇನ್ನೊಂದೆಡೆ ತಾಳ್ಮೆಯ ಆಟವಾಡಿದ ಮಯಾಂಕ್ ಅಗರ್ವಾಲ್ 108 ರನ್ ಗಳಿಸಿ ಇದೀಗಷ್ಟೇ ವಿಕೆಟ್ ಒಪ್ಪಿಸಿದ್ದಾರೆ. ಮತ್ತೊಂದೆಡೆ ನಾಯಕ ವಿರಾಟ್ ಕೊಹ್ಲಿ 8 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಒಟ್ಟಾರೆಯಾಗಿ ಇತ್ತೀಚೆಗಿನ ವರದಿ ಬಂದಾಗ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿದೆ.