ವಿಮಾನದಲ್ಲಿ ಅಸ್ವಸ್ಥರಾದ ಮಯಾಂಕ್ ಅಗರ್ವಾಲ್ ರಿಂದ ಪೊಲೀರಿಗೆ ದೂರು

Krishnaveni K
ಬುಧವಾರ, 31 ಜನವರಿ 2024 (11:39 IST)
ಅಗರ್ತಲಾ: ವಿಮಾನ ಪ್ರಯಾಣ ವೇಳೆ ನೀರು ಕುಡಿದು ಅಸ್ವಸ್ಥರಾದ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಪೊಲೀಸರಿಗೆ ದೂರು ನೀಡಿದ್ದಾರೆ.

ಶುಕ್ರವಾರ ರೈಲ್ವೇಸ್ ತಂಡದ ವಿರುದ್ಧ ನಡೆಯಲಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಭಾಗಿಯಾಗಲು ಸೂರತ್ ವಿಮಾನ ಪ್ರಯಾಣ ಮಾಡುವಾಗ ನೀರು ಕುಡಿದ ನಂತರ ಮಯಾಂಕ್ ಅಸ್ವಸ್ಥರಾಗಿದ್ದರು. ತೀವ್ರ ವಾಂತಿ ಮತ್ತು ಗಂಟಲಲ್ಲಿ ಉರಿ ಕಾಣಿಸಿಕೊಂಡಿತ್ತು. ಹೀಗಾಗಿ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ನಾಳೆ ಅವರು ಡಿಸ್ಚಾರ್ಜ್ ಆಗುವ ಸಾಧ‍್ಯತೆಯಿದೆ. ಹಾಗಿದ್ದರೂ ಅವರು ಮುಂದಿನ ರಣಜಿ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಹೀಗಾಗಿ ತಂಡದ ಜೊತೆ ಪ್ರಯಾಣಿಸದೇ ನೇರವಾಗಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಇದೀಗ ಘಟನೆ ಬಗ್ಗೆ ತನಿಖೆ ನಡೆಸಲು ಮಯಾಂಕ್ ತಮ್ಮ ಮ್ಯಾನೇಜರ್ ಮೂಲಕ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ಕೈಗೆತ್ತಿಕೊಳ್ಳುವುದಾಗಿ ಪಶ್ಚಿಮ ತ್ರಿಪುರ ಎಸ್ ಪಿ ಕಿರಣ್ ಕುಮಾರ್ ತಿಳಿಸಿದ್ದಾರೆ. ಇದೀಗ ಮಯಾಂಕ್ ಕುಡಿದ ನೀರಿನ ಬಾಟಲಿಯಲ್ಲಿ ಅನಾರೋಗ್ಯಕ್ಕೆ ಕಾರಣವಾಗುವಂತಹದ್ದು ಏನಿತ್ತು ಎಂದು ತನಿಖೆ ನಡೆಯಲಿದೆ.

ರಣಜಿ ಪಂದ್ಯಕ್ಕೆ ಅಲಭ್ಯ
ಶುಕ್ರವಾರ ರೈಲ್ವೇಸ್ ವಿರುದ್ಧ ನಡೆಯಲಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಮಯಾಂಕ್ ಭಾಗಿಯಾಗಬೇಕಾಗಿತ್ತು. ಆದರೆ ಅನಾರೋಗ್ಯದಿಂದಾಗಿ ಅವರು ಭಾಗಿಯಾಗುತ್ತಿಲ್ಲ. ಕರ್ನಾಟಕದ ಇತರೆ ಆಟಗಾರರು ರಾಜ್ ಕೋಟ್ ಗೆ ಪ್ರಯಾಣ ಬೆಳೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಪಿಎಲ್ 2026 ಪಂದ್ಯಗಳನ್ನು ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಎರಡನೇ ಮದುವೆಗೆ ಸಿದ್ಧರಾದ ಕ್ರಿಕೆಟಿಗ ಶಿಖರ್ ಧವನ್: ಮತ್ತೆ ವಿದೇಶೀ ಬೆಡಗಿ ವಧು

ಡಬ್ಲ್ಯುಪಿಎಲ್ 2026: ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಕೆಕೆಆರ್‌ನಿಂದ ಮುಸ್ತಾಫಿಜುರ್ ರೆಹಮಾನ್ ಔಟ್‌: ಬಾಂಗ್ಲಾದೇಶದಲ್ಲಿ ಐಪಿಎಲ್‌ ನಿಷೇಧ

ನಾಳೆಯಿಂದ ಮತ್ತೆ ವಿಜಯ್ ಹಜಾರೆ ಟ್ರೋಫಿ: ಕೊಹ್ಲಿ, ರೋಹಿತ್ ಆಡ್ತಾರಾ ಎನ್ನುವುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments