ಹೈದರಾಬಾದ್: ಇಲ್ಲಿಯ ರಾಜೀವ್ ಗಾಂಧಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್‌ನ 41ನೇ ಪಂದ್ಯಾಟದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗುತ್ತಿದೆ.
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರು ಮೊದಲು ಪೀಲ್ಡಿಂಗ್ ಆಯ್ದುಕೊಂಡು, ಹೈದರಾಬಾದ್ ಅನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.
ಹೈದರಾಬಾದ್ ಇದುವರೆಗೆ ಎದುರಿಸಿದ 7 ಪಂದ್ಯಾಟಗಳಲ್ಲಿ 5ರಲ್ಲಿ ಹ್ಯಾಟ್ರಿಕ್ ಸೋಲು ಅನುಭವಿಸಿ, ಪಾಯಿಂಟ್ಸ್ ಟೇಬಲ್‌ನಲ್ಲಿ 9ನೇ ಸ್ಥಾನದಲ್ಲಿದೆ.
ಮುಂಬೈ ಇಂಡಿಯನ್ಸ್ ನಡೆದ 8 ಪಂದ್ಯಾಟಗಳಲ್ಲಿ ನಾಲ್ಕರಲ್ಲಿ ಸೋಲು ಅನುಭವಿಸಿ, ನಾಲ್ಕರಲ್ಲಿ ಗೆದ್ದು 6 ಸ್ಥಾನದಲ್ಲಿದೆ.
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರಿಯಾನ್ ರಿಕಲ್ಟನ್, ವಿಲ್ ಜ್ಯಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮ, ಹಾರ್ದಿಕ್ ಪಾಂಡ್ಯ (ಸಿ), ನಮನ್ ಧೀರ್,
ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ವಿಘ್ನೇಶ್ ಪುತ್ತೂರು
ಸನ್‌ರೈಸರ್ಸ್ ಹೈದರಾಬಾದ್: ಟ್ರಾವಿಸ್ ಹೆಡ್, ಅಭಿಶೇಕ್ ಶರ್ಮಾ, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಕ್ ಕ್ಲಾಸೆನ್ †, ಅನಿಕೇತ್ ವರ್ಮಾ, ಪ್ಯಾಟ್ ಕಮ್ಮಿನ್ಸ್ (ಸಿ), ಹರ್ಷಲ್ ಪಟೇಲ್, ಜಯದೇವ್ ಉನದ್ಕತ್, ಜೀಶನ್ ಅನ್ಸಾರಿ, ಈಶಾನ್ ಮಾಲಿಂಗ