Select Your Language

Notifications

webdunia
webdunia
webdunia
webdunia

ಅಭಿಮಾನಿಗಳಿಗೆ ಬೇಸರದ ಸಂಗತಿ ಹೇಳಿದ ಮಹಿಳಾ ಸ್ಟಾರ್ ಆಟಗಾರ್ತಿ ಮಿಥಾಲಿ ರಾಜ್

ಅಭಿಮಾನಿಗಳಿಗೆ ಬೇಸರದ ಸಂಗತಿ ಹೇಳಿದ ಮಹಿಳಾ ಸ್ಟಾರ್ ಆಟಗಾರ್ತಿ ಮಿಥಾಲಿ ರಾಜ್
ಮುಂಬೈ , ಬುಧವಾರ, 14 ನವೆಂಬರ್ 2018 (09:18 IST)
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡ ಎಂದರೆ ಮಿಥಾಲಿ ರಾಜ್ ಎನ್ನುವಷ್ಟರ ಮಟ್ಟಿಗೆ ಅವರು ಹಲವು ವರ್ಷಗಳಿಂದ ತಂಡದ ಅವಿಭಾಜ್ಯ ಅಂಗವಾಗಿದ್ದಾರೆ. ಆದರೆ ಅವರೀಗ ತಮ್ಮ ಅಭಿಮಾನಿಗಳಿಗೆ ಬೇಸರದ ಸುದ್ದಿ ಕೊಟ್ಟಿದ್ದಾರೆ.

ಮೊನ್ನೆಯಷ್ಟೇ ಪಾಕ್ ವಿರುದ್ಧ ಟಿ20 ವಿಶ್ವಕಪ್ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದ ಮಿಥಾಲಿ ರಾಜ್ ಟಿ20 ಕ್ರಿಕೆಟ್ ನಲ್ಲಿ ಭಾರತದ ಪರ ಗರಿಷ್ಠ ರನ್ ಗಳಿಸಿದ ದಾಖಲೆ ಮಾಡಿದ್ದರು. ಆದರೆ ಇದೀಗ ಅವರು ಟಿ20 ಕ್ರಿಕೆಟ್ ನಿಂದ ನಿವೃತ್ತಿಯಾಗುವ ಮಾತನಾಡಿದ್ದಾರೆ.

ಬಹುಶಃ ಇದೇ ತನ್ನ ಕೊನೆಯ ವಿಶ್ವಕಪ್ ಎಂದಿರುವ 35 ವರ್ಷದ ಮಿಥಾಲಿ, ತಂಡಕ್ಕೆ ಯುವ ಆಟಗಾರರ ಆಗಮನವಾಗುತ್ತಿದೆ. ಸಾಕಷ್ಟು ಬದಲಾವಣೆಗಳಾಗುತ್ತಿವೆ. ಯುವ ಆಟಗಾರರು ಜವಾಬ್ಧಾರಿ ವಹಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಬಹುಶಃ ಇದುವೇ ನನ್ನ ಕೊನೆಯ ಟಿ20 ವಿಶ್ವಕಪ್ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ರೋಹಿತ್ ಶರ್ಮಾಗಾಗಿ ಐಪಿಎಲ್ ನಲ್ಲಿ ಈ ಕೆಲಸ ಮಾಡಲಿದ್ದಾರಂತೆ ಶಾರುಖ್ ಖಾನ್!