Webdunia - Bharat's app for daily news and videos

Install App

ಬಿಸಿಸಿಐ ಸಾರಥಿಯಾಗಿ ಮಿಥುನ್ ಮನ್ಹಾಸ್ ನೇಮಕ: ಕರ್ನಾಟಕದ ರಘುರಾಮ್ ಭಟ್ ಖಜಾಂಚಿ

Sampriya
ಭಾನುವಾರ, 28 ಸೆಪ್ಟಂಬರ್ 2025 (15:15 IST)
Photo Credit X
ಮುಂಬೈ: ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ನೂತನ ಅಧ್ಯಕ್ಷರನ್ನಾಗಿ ದೆಹಲಿಯ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಅವರನ್ನು ನೇಮಿಸಲಾಗಿದೆ. 

ಭಾನುವಾರ ಮುಂಬೈನಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆ ಮುಕ್ತಾಯದ ನಂತರ ಮನ್ಹಾಸ್ ಅವರನ್ನು ಹೊಸ ಅಧ್ಯಕ್ಷರನ್ನಾಗಿ ಘೋಷಿಸಲಾಗಿದೆ.

ರೋಜರ್ ಬಿನ್ನಿ ಅವರ ಉತ್ತರಾಧಿಕಾರಿಯಾಗಿ ಮನ್ಹಾಸ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮಾಜಿ ಕ್ರಿಕೆಟಿಗ ರಾಜೀವ್ ಶುಕ್ಲಾ ಅವರನ್ನು ಉಪಾಧ್ಯಕ್ಷರನ್ನಾಗಿ, ದೇವಜಿತ್ ಸೈಕಿಯಾ ಅವರನ್ನು ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಇದಲ್ಲದೆ, ಪ್ರಭತೇಜ್ ಸಿಂಗ್ ಭಾಟಿಯಾ ಜಂಟಿ ಕಾರ್ಯದರ್ಶಿಯಾಗಿ, ಕರ್ನಾಟಕದ ಎ. ರಘುರಾಮ್ ಭಟ್ ಮಂಡಳಿಯ ಖಜಾಂಚಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

45 ವರ್ಷದ ಮಿಥುನ್ ಮನ್ಹಾಸ್ ಮಾಜಿ ಆಲ್‌ರೌಂಡರ್ ಒಟ್ಟು 157 ಪ್ರಥಮ ದರ್ಜೆ ಪಂದ್ಯಗಳು, 130 ಲಿಸ್ಟ್ ಎ ಪಂದ್ಯಗಳು ಮತ್ತು 91 ಟಿ20 ಪಂದ್ಯಗಳನ್ನು ಆಡಿದ್ದಾರೆ.

157 ಪ್ರಥಮ ದರ್ಜೆ ಪಂದ್ಯಗಳಲ್ಲಿ ಮನ್ಹಾಸ್ 9,714 ರನ್ ಗಳಿಸಿದ್ದಾರೆ. 130 ಲಿಸ್ಟ್ ಎ ಪಂದ್ಯಗಳಲ್ಲಿ 4,126 ರನ್ ಗಳಿಸಿದ್ದಾರೆ. ಇದಲ್ಲದೆ, ಅವರು 91 ಟಿ 20 ಪಂದ್ಯಗಳಲ್ಲಿ 1,170 ರನ್ ಗಳಿಸಿದ್ದಾರೆ. 

ಅವರು ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ನಲ್ಲಿ ಮೂರು ಫ್ರಾಂಚೈಸಿಗಳಾದ ಡೆಲ್ಲಿ ಡೇರ್‌ಡೆವಿಲ್ಸ್, ಪುಣೆ ವಾರಿಯರ್ಸ್ ಇಂಡಿಯಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ಗಳೊಂದಿಗೆ ಆಡಿದ್ದರು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೇ ಟೀಂ ಇಂಡಿಯಾದಲ್ಲಿ ಸ್ಥಾನ ಗ್ಯಾರಂಟಿ ಇಲ್ಲ

ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಇದೇ ಕಾರಣಕ್ಕೆ

ಆಸ್ಟ್ರೇಲಿಯಾ ವಿರುದ್ಧ ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಶರ್ಮಾ, ಕೊಹ್ಲಿ ಕಮ್ ಬ್ಯಾಕ್

ಕ್ಯಾಪ್ಟನ್ಸಿಯಿಂದ ರೋಹಿತ್ ಶರ್ಮಾಗೆ ಕೊಕ್: ಈಡೇರದೇ ಹೋಯ್ತಾ ಆ ಕನಸು

IND vs WI Test: ಜಡೇಜ ದಾಳಿಗೆ ಕುಸಿದ ವಿಂಡೀಸ್: ಶುಭಮನ್‌ ನಾಯಕತ್ವಕ್ಕೆ ತವರಿನಲ್ಲಿ ಮೊದಲ ಜಯ

ಮುಂದಿನ ಸುದ್ದಿ
Show comments