ಮೊಹಮ್ಮದ್ ಶಮಿ ಒಳ್ಳೆ ಗಂಡ, ತಂದೆಯಾಗಬೇಕಿತ್ತು: ಮಾಜಿ ಪತ್ನಿ ಹಸೀನ್

Webdunia
ಶನಿವಾರ, 18 ನವೆಂಬರ್ 2023 (09:00 IST)
ನವದೆಹಲಿ: ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಪರ ಮಿಂಚುತ್ತಿರುವ ವೇಗಿ ಮೊಹಮ್ಮದ್ ಶಮಿ ಬಗ್ಗೆ ಮಾಜಿ ಪತ್ನಿ ಹಸೀನ್ ಜಹಾನ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಶಮಿ ಮತ್ತು ಹಸೀನ್ ಬೇರೆಯಾಗಿ ಕೆಲವು ಸಮಯವೇ ಕಳೆದಿದೆ. ಇಬ್ಬರಿಗೂ ಓರ್ವ ಪುತ್ರಿಯೂ ಇದ್ದಾಳೆ. ಆದರೆ ಶಮಿ ವಿರುದ್ಧ ಮ್ಯಾಚ್ ಫಿಕ್ಸಿಂಗ್, ಅನೈತಿಕ ಸಂಬಂಧ, ಗೃಹಹಿಂಸೆ ಇತ್ಯಾದಿ ಆರೋಪ ಮಾಡಿ ಹಸೀನಾ ದೂರವಾಗಿದ್ದರು.

ಇದೀಗ ಶಮಿ ವಿಶ್ವಕಪ್ ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದಂತೆ ಹಸೀನ್ ತನ್ನ ಗಂಡನ ಬಗ್ಗೆ ಮಾಧ‍್ಯಮಗಳ ಮುಂದೆ ಮಾತನಾಡಲು ಶುರು ಮಾಡಿದ್ದಾರೆ. ‘ಶಮಿ ಹೇಗೆ ಒಳ್ಳೆಯ ಆಟಗಾರನಾಗಿದ್ದಾರೋ, ಹಾಗೆಯೇ ಒಳ್ಳೆಯ ಗಂಡ, ತಂದೆಯಾಗಬೇಕಿತ್ತು. ಆತ ಒಳ್ಳೆಯ ವ್ಯಕ್ತಿಯಾಗಿದ್ದರೆ ನನ್ನ ಗಂಡ, ಮಕ್ಕಳು ಎಂದು ಖುಷಿಯಾಗಿ ಸಂಸಾರ ಮಾಡಿಕೊಂಡಿರುತ್ತಿದ್ದೆ. ಆತ ಒಳ್ಳೆಯ ಆಟಗಾರನಾಗದೇ ಹೋಗಿದ್ದರೂ ಒಳ್ಳೆಯ ವ್ಯಕ್ತಿಯಾಗಿದ್ದರೆ ಸಾಕಾಗಿತ್ತು’ ಹಸೀನ್ ಹೇಳಿದ್ದಾರೆ.

ಇದಕ್ಕೆ ಮೊದಲು ಹಸೀನ್, ಶಮಿ ಉತ್ತಮ ಪ್ರದರ್ಶನ ನೀಡುತ್ತಿದ್ದರೆ ನಮ್ಮ ಭವಿಷ್ಯಕ್ಕೆ ಒಳ್ಳೆಯದು ಎಂದಿದ್ದರು. ಇದೀಗ ಮತ್ತೆ ಸೆಮಿಫೈನಲ್ ನಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡುತ್ತಿದ್ದಂತೇ ಇಂತಹದ್ದೊಂದು ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments