Publish Date: Sun, 18 Mar 2018 (08:59 IST)
Updated Date: Sun, 18 Mar 2018 (09:01 IST)
ಕೋಲ್ಕೊತ್ತಾ: ಗೃಹ ಹಿಂಸೆ ಆರೋಪ ಎದುರಿಸುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ಯಾವುದೇ ಕಾರಣಕ್ಕೂ ಪತ್ನಿ ಜತೆ ಇನ್ನು ಮುಂದೆ ಕಾಂಪ್ರಮೈಸ್ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ನನ್ನ ಅಮಾಯಕತೆ ಸಾಬೀತುಪಡಿಸಲು ಬೇಕಾದಷ್ಟು ಸಾಕ್ಷ್ಯಗಳು ನನ್ನಲ್ಲಿವೆ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಆಕೆಯ ಜತೆ ಕೋರ್ಟ್ ಹೊರಗೆ ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥಗೊಳಿಸುವ ಪ್ರಶ್ನೆಯೇ ಇಲ್ಲ. ಏನಿದ್ದರೂ ಕಾನೂನಾತ್ಮಕವಾಗಿಯೇ ಹೋರಾಡುತ್ತೇನೆ’ ಎಂದು ಶಮಿ ಹೇಳಿಕೊಂಡಿದ್ದಾರೆ.
ಈ ಪ್ರಕರಣದಿಂದಾಗಿ ಶಮಿ ವೃತ್ತಿ ಜೀವನಕ್ಕೆ ಸಾಕಷ್ಟು ಹಾನಿಯಾಗಿದೆ. ಹೀಗಾಗಿ ಸಿಟ್ಟಿಗೆದ್ದಿರುವ ಶಮಿ ಹೊಂದಾಣಿಕೆ ಮಾಡಿಕೊಳ್ಳದೇ ಇರಲು ನಿರ್ಧರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ