Publish Date: Sat, 28 Oct 2023 (09:20 IST)
Updated Date: Sat, 28 Oct 2023 (09:26 IST)
ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಮೊದಲ ನಾಲ್ಕು ಪಂದ್ಯಗಳಲ್ಲಿ ಅನುಭವಿ ಮೊಹಮ್ಮದ್ ಶಮಿಯನ್ನು ಹೊರಗಿಟ್ಟು ಟೀಕೆಗೊಳಗಾಗಿತ್ತು.
ಶಮಿ ಬದಲಿಗೆ ಮೊದಲ ನಾಲ್ಕು ಪಂದ್ಯಗಳಲ್ಲಿ ಶಾರ್ದೂಲ್ ಮತ್ತು ರವಿಚಂದ್ರನ್ ಅಶ್ವಿನ್ ರನ್ನು ಕಣಕ್ಕಿಳಿಸಲಾಗಿತ್ತು. ಆದರೆ ಧರ್ಮಶಾಲಾದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಶಮಿ ಕಣಕ್ಕಿಳಿದಿದ್ದಲ್ಲದೆ ಐದು ವಿಕೆಟ್ ಕಬಳಿಸುವ ಮೂಲಕ ತಂಡಕ್ಕೆ ತಾವೇಕೆ ಅಗತ್ಯ ಎಂಬುದನ್ನು ತೋರಿಸಿಕೊಟ್ಟರು.
ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಶಾರ್ದೂಲ್ ಗಿಂತ ಮೊಹಮ್ಮದ್ ಶಮಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗುವುದು ಖಚಿತ. ಇದರೊಂದಿಗೆ ಟೀಂ ಇಂಡಿಯಾ ವೇಗದ ಬೌಲಿಂಗ್ ವಿಭಾಗ ಮತ್ತಷ್ಟು ಬಲವಾಗಲಿದೆ.