ಲಾರ್ಡ್ಸ್: ಟೀಂ ಇಂಡಿಯಾ ಯುವ ವೇಗಿ ಮೊಹಮ್ಮದ್ ಸಿರಾಜ್ ಆಡಿದ್ದು ಏಳೇ ಟೆಸ್ಟ್ ಪಂದ್ಯಗಳು. ಆದರೆ ಆಡಿದ ಎಲ್ಲಾ ಪಂದ್ಯಗಳಲ್ಲೂ ಗಮನಾರ್ಹ ಪ್ರದರ್ಶನ ನೀಡುವ ಮೂಲಕ ಭವಿಷ್ಯದ ತಾರೆ ಎಂಬ ಸೂಚನೆ ನೀಡಿದ್ದಾರೆ.
ಸಿರಾಜ್ ಮೊದಲ ಬಾರಿಗೆ ಗಮನ ಸೆಳೆದಿದ್ದು ಐಪಿಎಲ್ ನಲ್ಲಾದರೂ, ಬಳಿಕ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ದರು. ಭಾರತದಲ್ಲಿ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಅವರಿಗೆ ಅವಕಾಶ ಸಿಕ್ಕಿದ್ದು ಕಡಿಮೆ. ಆದರೆ ಈಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಎದುರಾಳಿಗಳಿಗೆ ಮಾರಕವಾಗುತ್ತಿದ್ದಾರೆ.
ದ್ವಿತೀಯ ಟೆಸ್ಟ್ ಪಂದ್ಯದ ಬಳಿಕವಂತೂ ಅವರು ಐತಿಹಾಸಿಕ ದಾಖಲೆ ಮಾಡಿದ್ದಾರೆ. ಈ ಪಂದ್ಯದಲ್ಲಿ ಅವರು ಒಟ್ಟು 8 ವಿಕೆಟ್ ಕಬಳಿಸಿದರು. ಈ ಮೂಲಕ ಲಾರ್ಡ್ಸ್ ಅಂಗಣದಲ್ಲಿ ಒಂದೇ ಪಂದ್ಯದಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಕಪಿಲ್ ದೇವ್ ಸಾಧನೆಯನ್ನು ಸರಿಗಟ್ಟಿದ್ದಾರೆ. ಈ ಮೂಲಕ ಆಡಿದ್ದು ಏಳು ಪಂದ್ಯವಾದರೂ ಈಗಾಗಲೇ ಟೀಂ ಇಂಡಿಯಾದ ಪ್ರಮುಖ ಬೌಲಿಂಗ್ ಅಸ್ತ್ರ ಎನ್ನುವುದನ್ನು ಸಾಬೀತುಪಡಿಸಿದ್ದಾರೆ.