ಪೋರ್ಟ್ ಆಫ್ ಸ್ಪೇನ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸಿದ್ದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದರು.
ಈ ಪ್ರಶಸ್ತಿ ಟೆಸ್ಟ್ ಕ್ರಿಕೆಟ್ ಮಾದರಿಯಲ್ಲಿ ಅವರ ಮೊದಲ ಪಂದ್ಯ ಶ್ರೇಷ್ಠ ಪ್ರಶಸ್ತಿ ಎನ್ನುವುದು ವಿಶೇಷ. ಈ ವಿಶೇಷ ಮಾಹಿತಿಯನ್ನು ಅವರು ಪ್ರಶಸ್ತಿ ಸ್ವೀಕರಿಸಿದ ಬಳಿಕ ಹಂಚಿಕೊಂಡಿದ್ದಾರೆ.
ಟೆಸ್ಟ್ ನಲ್ಲಿ ಮೊದಲ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆಯುತ್ತಿದ್ದೇನೆ. ಈ ಪ್ರದರ್ಶನ ನನಗೆ ತೃಪ್ತಿ ತಂದಿದೆ. ವೇಗಿಗಳಿಗೆ ಇಲ್ಲಿ ಹೆಚ್ಚೇನೂ ಇರಲಿಲ್ಲ. ಆದರೆ ನನಗೆ ರೋಹಿತ್ ಭಾಯಿ ಬೆಂಬಲ ನೀಡಿದರು. ಯಾವುದೇ ಒತ್ತಡ ಮೈಮೇಲೆ ಹಾಕಿಕೊಳ್ಳದೇ ಆಟ ಎಂಜಾಯ್ ಮಾಡಲು ಹೇಳಿದರು ಎಂದು ಪ್ರಶಸ್ತಿ ಸ್ವೀಕರಿಸಿದ ಬಳಿಕ ಸಿರಾಜ್ ಹೇಳಿದ್ದಾರೆ.