ಮುಂಬೈ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡುವುದು ಅನುಮಾನವಾಗಿದೆ ಎಂಬ ಸುದ್ದಿ ಬಂದಿದೆ.
									
			
			 
 			
 
 			
					
			        							
								
																	ವಿಶ್ವಕಪ್ ಹೀರೋ ಮೊಹಮ್ಮದ್ ಶಮಿ ಪಾದದ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ  ಈಗ ಅವರು ಆಫ್ರಿಕಾ ಸರಣಿಯಲ್ಲಿ ಭಾಗವಹಿಸುವುದು ಅನುಮಾನ ಎನ್ನಲಾಗಿದೆ.
									
										
								
																	ಇಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸೇರಿದಂತೆ ಟೆಸ್ಟ್ ಸರಣಿ ಆಡುವ ಆಟಗಾರರು ಆಫ್ರಿಕಾಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಆದರೆ ಆ ಪಟ್ಟಿಯಲ್ಲಿ ಶಮಿ ಹೆಸರಿಲ್ಲ.
									
											
							                     
							
							
			        							
								
																	ಒಂದು ವೇಳೆ ಅವರು ಚೇತರಿಸಿಕೊಂಡರೆ ಮಾತ್ರ ತಡವಾಗಿ ಆಫ್ರಿಕಾಗೆ ಪ್ರಯಾಣ ಬೆಳೆಸಬಹುದು. ಇಲ್ಲದೇ ಹೋದರೆ ಮುಂಬರುವ ಇಂಗ್ಲೆಂಡ್ ಸರಣಿ ವೇಳೆಗೆ ತಂಡವನ್ನು ಕೂಡಿಕೊಳ್ಳಬಹುದು.