Webdunia - Bharat's app for daily news and videos

Install App

ಬಿಜೆಪಿ ಮಾಸ್ಟರ್ ಸ್ಟ್ರೋಕ್: ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಕ್ರಿಕೆಟಿಗ ಮೊಹಮ್ಮದ್ ಶಮಿ

Krishnaveni K
ಶುಕ್ರವಾರ, 8 ಮಾರ್ಚ್ 2024 (15:00 IST)
Photo Courtesy: Twitter
ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತು ಬಲವಾಗಿ ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಶಮಿ ಇನ್ನೂ ತಮ್ಮ ನಿರ್ಧಾರ ಪ್ರಕಟಿಸಿಲ್ಲ.

ಮುಂಬರುವ ಲೋಕಸಭೆ ಚುನಾವಣೆಗೆ ಈಗಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ರೆಡಿ ಮಾಡಿಕೊಂಡಿದೆ. ಈ ಪಟ್ಟಿಯಲ್ಲಿ ಯಾರೆಲ್ಲಾ ಇರಲಿದ್ದಾರೆ ಎನ್ನುವುದು ಈಗ ಸಸ್ಪೆನ್ಸ್ ಆಗಿದೆ. ಆದರೆ ಪಶ್ಚಿಮ ಬಂಗಾಲದಿಂದ ಮೊಹಮ್ಮದ್ ಶಮಿಯನ್ನು ಕಣಕ್ಕಿಳಿಸಲು ಬಿಜೆಪಿ ಯೋಜನೆ ಹಾಕಿಕೊಂಡಿದೆಯಂತೆ.

ಪಶ್ಚಿಮ ಬಂಗಾಲದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಗೆ ಕಡಿವಾಣ ಹಾಕಲು ಬಿಜೆಪಿ ಶಮಿಯನ್ನು ಅಸ್ತ್ರವಾಗಿ ಬಳಸಲು ಮುಂದಾಗಿದೆ. ಇದಕ್ಕಾಗಿ ಶಮಿಗೆ ಲೋಕಸಭೆ ಟಿಕೆಟ್ ಆಫರ್ ನೀಡಿದೆ. ಆದರೆ ಇದುವರೆಗೆ ಶಮಿ ಈ ಆಫರ್ ನ್ನು ಸ್ವೀರಿಸಿಲ್ಲ ಜೊತೆಗೆ ತಿರಸ್ಕರಿಸಿಯೂ ಇಲ್ಲ!

ಕೆಲವು ಸಮಯದ ಮೊದಲು ಟೀಂ ಇಂಡಿಯಾ ವಿಶ್ವಕಪ್ ಫೈನಲ್ ಸೋತಾಗ ಪ್ರಧಾನಿ ಮೋದಿ ಡ್ರೆಸ್ಸಿಂಗ್ ರೂಂಗೆ ತೆರಳಿ ಆಟಗಾರರನ್ನು ಹುರಿದುಂಬಿಸಿದ್ದರು. ಅವರಲ್ಲಿ  ವಿಶೇಷವಾಗಿ ಮೊಹಮ್ಮದ್ ಶಮಿಯ ಬೆನ್ನುತಟ್ಟಿದ್ದರು. ಯಾಕೆಂದರೆ ಕಳೆದ ವಿಶ್ವಕಪ್ ನಲ್ಲಿ ಶಮಿ ಅತೀ ಹೆಚ್ಚು ವಿಕೆಟ್ ಪಡೆದು ಹೀರೋ ಎನಿಸಿಕೊಂಡಿದ್ದರು. ಈ ಘಟನೆ ಬಳಿಕ ಮೊಹಮ್ಮದ್ ಶಮಿ ಬೇಸರದಲ್ಲಿದ್ದ ಕ್ರಿಕೆಟಿಗರಿಗೆ ಸ್ಪೂರ್ತಿ ತುಂಬಿದ್ದಕ್ಕೆ ಪ್ರಧಾನಿ ಮೋದಿಗೆ ಧನ್ಯವಾದ ಸಲ್ಲಿಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಆಕಾಶ್‌ ದೀಪ್‌ ಬೆಂಕಿ ದಾಳಿಗೆ ಇಂಗ್ಲೆಂಡ್ ತತ್ತರ: ಶುಭಮನ್‌ ಗಿಲ್‌ ಬಗಳಕ್ಕೆ ದಾಖಲೆಯ 336 ರನ್‌ಗಳ ಭರ್ಜರಿ ಜಯ

England-India Test: ರನ್‌ ಹೊಳೆ ಹರಿಸಿದ ಶುಭಮನ್‌ ಗಿಲ್‌ನನ್ನು ಮುಕ್ತ ಕಂಠದಿಂದ ಕೊಂಡಾಡಿದ ವಿರಾಟ್‌ ಕೊಹ್ಲಿ

ಮುಂದಿನ ಸುದ್ದಿ
Show comments