Publish Date: Thu, 03 Oct 2024 (14:19 IST)
Updated Date: Thu, 03 Oct 2024 (14:21 IST)
ಹೈದರಾಬಾದ್: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಕಾಂಗ್ರೆಸ್ ನಾಯಕ ಮೊಹಮ್ಮದ್ ಅಜರುದ್ದೀನ್ಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.
ಅಕ್ಟೋಬರ್ 3ರಂದು ಹೈದರಾಬಾದಿನಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ,
ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧ ಕಳೆದ ವರ್ಷ ನವೆಂಬರ್ನಲ್ಲಿ ಅಜರುದ್ದೀನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.
ಹೈದರಾಬಾದ್ ಕ್ರಿಕೆಟ್ ಅಸೋಶಿಯೇಷನ್‌ನಲ್ಲಿ ನಡೆದಿದೆ ಎನ್ನಲಾದ ₹ 20 ಕೋಟಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ತೆಲಂಗಾಣದ ಎಸಿಬಿ ದಾಖಲಿಸಿದ್ದ ಮೂರು ಎಫ್‌ಐಆರ್ ಆಧರಿಸಿ ಇ.ಡಿ ಪ್ರಕರಣ ದಾಖಲು ಮಾಡಿಕೊಂಡಿದೆ.