ಗೌತಮ್ ಗಂಭೀರ್ ಗೆ ಸಾಕಾ ಇನ್ನೂ ಬೇಕಾ.. ನೆಟ್ಟಿಗರಿಂದ ತಪರಾಕಿ

Krishnaveni K
ಸೋಮವಾರ, 3 ನವೆಂಬರ್ 2025 (11:53 IST)
ಅರ್ಷ್ ದೀಪ್ ಸಿಂಗ್ ರನ್ನು ಕಡೆಗಣಿಸಿ ಹರ್ಷಿತ್ ರಾಣಾಗೆ ಪದೇ ಪದೇ ಅವಕಾಶ ನೀಡುತ್ತಿದ್ದ ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ರನ್ನು ಈಗ ನೆಟ್ಟಿಗರು ಇನ್ನಿಲ್ಲದಂತೆ ರೋಸ್ಟ್ ಮಾಡುತ್ತಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಮೊದಲ ಎರಡು ಟಿ20 ಪಂದ್ಯಗಳಿಗೆ ಈ ಮಾದರಿಯ ಸ್ಪೆಷಲಿಸ್ಟ್ ಬೌಲರ್ ಅರ್ಷ್ ದೀಪ್ ಸಿಂಗ್ ರನ್ನು ಕಡೆಗಣಿಸಿ ತಮ್ಮ ಮೆಚ್ಚಿನ ಹರ್ಷಿತ್ ರಾಣಾಗೆ ಗೌತಮ್ ಗಂಭೀರ್ ಅವಕಾಶ ಕೊಟ್ಟಿದ್ದು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಕೊನೆಗೆ ಈಗ ಮೂರನೇ ಪಂದ್ಯದಲ್ಲಿ ಭಾರತ ಗೆಲ್ಲುವ ಒತ್ತಡದಲ್ಲಿದ್ದಾಗ ಗಂಭಿರ್ ಅನಿವಾರ್ಯವಾಗಿ ಹರ್ಷಿತ್ ರನ್ನು ಪಕ್ಕಕ್ಕಿಟ್ಟು ಅರ್ಷ್ ದೀಪ್ ಸಿಂಗ್ ರನ್ನು ಆಡಿಸಿದ್ದಾರೆ. ಈ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಮಾಡಿದ ಅರ್ಷ್ ದೀಪ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನೂ ಪಡೆದರು.

ಇದಾದ ಬಳಿಕ ನೆಟ್ಟಿಗರು ಗಂಭೀರ್ ರನ್ನು ಟ್ರೋಲ್ ಮಾಡುತ್ತಿದ್ದಾರೆ. ಗಂಭೀರ್ ಕತ್ತು ಹಿಡಿದು ಅರ್ಷ್ ದೀಪ್  ಸಾಕಾ ಇನ್ನೂ ಬೇಕಾ ಎಂದು ಕೇಳುವ ರೀತಿಯಲ್ಲಿ ಮೆಮೆ ಸೃಷ್ಟಿಸಿ ಟ್ರೋಲ್ ಮಾಡುತ್ತಿದ್ದಾರೆ. ಗಂಭೀರ್ ಗೆ ಈಗಲಾದರೂ ಅರ್ಷ್ ದೀಪ್ ಟಿ20 ಯಲ್ಲಿ ಯಾಕೆ ಬೇಕು ಎನ್ನುವುದು ಅರ್ಥವಾಗಲಿ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೇ ವಿಚಾರ ಹೇಳಿ ಹರ್ಲಿನ್ ಡಿಯೋಲ್ ಗೇ ಅಚ್ಚರಿ ನೀಡಿದ ಪ್ರಧಾನಿ ಮೋದಿ

ವಿಶ್ವಕಪ್ ಟ್ರೋಫಿ ಮುಟ್ಟದೇ ಪೋಸ್ ಕೊಟ್ಟ ಮೋದಿ: ಪ್ರಧಾನಿಗೆ ಕ್ರಿಕೆಟಿಗರು ಕೊಟ್ಟ ಗಿಫ್ಟ್ ಏನು

ವಿಶ್ವ ಚಾಂಪಿಯನ್ ಆದ ಮಹಿಳಾ ಕ್ರಿಕೆಟಿಗರನ್ನು ಭೇಟಿಯಾದ ಮೋದಿ: ಟ್ರೋಫಿ ಜೊತೆಗೆ ಪೋಸ್

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಮುಂದಿನ ಸುದ್ದಿ
Show comments