Select Your Language

Notifications

webdunia
webdunia
webdunia
webdunia

ವಿರಾಟ್ ಕೊಹ್ಲಿ ಬದಲಿಗೆ ಟೀಂ ಇಂಡಿಯಾಗೆ ಹೊಸ ನಾಯಕ!

ವಿರಾಟ್ ಕೊಹ್ಲಿ ಬದಲಿಗೆ ಟೀಂ ಇಂಡಿಯಾಗೆ ಹೊಸ ನಾಯಕ!
ಮುಂಬೈ , ಮಂಗಳವಾರ, 8 ಮೇ 2018 (07:40 IST)
ಮುಂಬೈ: ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆಯ್ಕೆ ಇಂದು ನಡೆಯಲಿದ್ದು, ವಿರಾಟ್ ಕೊಹ್ಲಿ ಬದಲಿಗೆ ಹೊಸ ನಾಯಕನ ಆಗಮನವಾಗಲಿದೆ.

ಕೊಹ್ಲಿ ಕೌಂಟಿ ಕ್ರಿಕೆಟ್ ಆಡುವ ಕಾರಣಕ್ಕೆ ಅಫ್ಘಾನಿಸ್ತಾನದ ವಿರುದ್ಧ ಟೆಸ್ಟ್ ಪಂದ್ಯವನ್ನು ಮಿಸ್ ಮಾಡಿಕೊಳ್ಳಲಿದ್ದಾರೆ. ಹೀಗಾಗಿ ಕೊಹ್ಲಿ ಬದಲಿಗೆ ಟೀಂ ಇಂಡಿಯಾವನ್ನು ಅಜಿಂಕ್ಯಾ ರೆಹಾನೆ ಮುನ್ನಡೆಸಲಿದ್ದಾರೆ.

ರೆಹಾನೆ ಹಿಂದೆಯೂ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿ ಮೆಚ್ಚುಗೆಗೆ ಪಾತ್ರರಾಗಿದ್ದರು. ರೆಹಾನೆ ಜತೆಗೆ ರೋಹಿತ್ ಶರ್ಮಾ ಉಪನಾಯಕನಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಸುಳಿವು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ವಿರಾಟ್ ಕೊಹ್ಲಿ ಸ್ಥಾನಕ್ಕೆ ಟೀಂ ಇಂಡಿಯಾಗೆ ಬರಲಿದ್ದಾರೆ ಈ ಹೊಸ ಆಟಗಾರ!