ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಭಾರತ ವಿರುದ್ಧ ಸೋತ ಬೆನ್ನಲ್ಲೇ ನ್ಯೂಜಿಲೆಂಡ್ ತಂಡವು ನಾಯಕ ಮಿಚೆಲ್ ಸ್ಯಾಂಟನರ್ ಅವರಿಗೆ ವಿಶ್ರಾಂತಿ ನೀಡಿ, ಮುಂದಿನ ಸರಣಿಗೆ ಮತ್ತೊಬ್ಬ ಆಟಗಾರನಿಗೆ ಸಾರಥ್ಯ ವಹಿಸಿದೆ.
ದುಬೈನಲ್ಲಿ ಭಾನುವಾರ ನಡೆದ ಫೈನಲ್‌ನಲ್ಲಿ ಭಾರತ ತಂಡವು 4 ವಿಕೆಟ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ, ಮೂರನೇ ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಂಡಿತು. ಈ ಮೂಲಕ ಎರಡನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಡುವ ಕಿವೀಸ್ ಕನಸು ನುಚ್ಚುನೂರಾಗಿದೆ.
ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಆಲ್‌ರೌಂಡರ್ ಮಿಚೆಲ್ ಸ್ಯಾಂಟನರ್ ಎಲ್ಲರ ಗಮನ ಸೆಳೆದಿದ್ದಾರೆ. ಆದರೆ ಮುಂಬರುವ ಪಾಕಿಸ್ತಾನ ವಿರುದ್ದದ ಸರಣಿಗೆ ಇವರಿಂದ ನಾಯಕತ್ವವನ್ನು ನೀಡದೆ ವಿಶ್ರಾಂತಿ ನೀಡಲಾಗಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಫೈನಲ್ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ ನೀಡಿದ ಪ್ಲೇಯರ್ ಕಿವೀಸ್ ನಾಯಕತ್ವವನ್ನು ನೀಡಲಾಗಿದೆ. ಮಿಚೆಲ್ ಸ್ಯಾಂಟ್ನರ್ ಅವರಿಗೂ ಮುಂದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಪಾಕ್ ವಿರುದ್ದ ಟಿ20 ಸರಣಿಗೆ ತಂಡಕ್ಕೆ ಮೈಕಲ್ ಬ್ರೇಸ್‌ವೆಲ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.
ಸ್ಯಾಂಟನರ್‌ರಿಂದ ತೆರವಾದ ಸ್ಥಾನಕ್ಕೆ ನ್ಯೂಜಿಲೆಂಡ್ ಮೈಕೆಲ್ ಬ್ರೇಸ್‌ವೆಲ್ ಅವರನ್ನು ನೇಮಿಸಲಾಗಿದೆ. ಅವರ ಫೈನಲ್‌ನಲ್ಲಿ ಭಾರತ ವಿರುದ್ಧ 40 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್‌ನೊಂದಿಗೆ ಅಜೆಯ 53 ರನ್ ಸಿಡಿಸಿದ್ದರು. ಬೌಲಿಂಗ್‌ನಲ್ಲೂ 2 ವಿಕೆಟ್ ಕಬಳಿಸಿದ್ದರು. ಅದರ ಬೆನ್ನಲ್ಲೇ ಅವರಿಗೆ ಹೊಸ ಜವಾಬ್ದಾರಿ ದೊರಕಿದೆ.
ನ್ಯೂಜಿಲೆಂಡ್ ತಂಡ ಫೈನಲ್ ಹಂತವನ್ನು ತಲುಪುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದ ಯುವ ಆಟಗಾರ ರಚಿನ್ ರವೀಂದ್ರ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇವರು ಸ್ಥಿರ ಪ್ರದರ್ಶನದ ಫಲವಾಗಿ ಇವರಿಗೆ ಸರಣಿ ಶ್ರೇಷ್ಠ ಪ್ರಶಸ್ತಿ ಸಹ ಲಭಿಸಿತ್ತು.