ದುಬೈ: ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಮಣಿಸಿ ನ್ಯೂಜಿಲೆಂಡ್ ಮೊದಲ ಬಾರಿಗೆ ಫೈನಲ್ ಗೇರಿದೆ.
ಸೆಮಿಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 4 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ 19 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 167 ರನ್ ಗಳಿಸಿತು.
ನ್ಯೂಜಿಲೆಂಡ್ ಪರ ಡೆರಿಲ್ ಮಿಚೆಲ್ 47 ಎಸೆತಗಳಿಂದ 72 ರನ್ ಗಳಿಸಿದರು. ಈ ಮೂಲಕ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ನಲ್ಲಿ ಫೈನಲ‍್ ಗೇರಿದ ಸಾಧನೆ ಮಾಡಿತು. ಇಂದು ದ್ವಿತೀಯ ಸೆಮಿಫೈನಲ್ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿದೆ.