Publish Date: Thu, 02 Nov 2023 (11:30 IST)
Updated Date: Thu, 02 Nov 2023 (09:43 IST)
ಮುಂಬೈ: ಏಕದಿನ ವಿಶ್ವಕಪ್ ಪಂದ್ಯಗಳಲ್ಲಿ ಪಂದ್ಯ ಮುಕ್ತಾಯವಾದಾಗ ಸುಡುಮದ್ದಿನ ಪ್ರದರ್ಶನವಿರುತ್ತದೆ. ಆದರೆ ದೆಹಲಿ, ಮುಂಬೈನಲ್ಲಿ ಆಕರ್ಷಕ ಸುಡುಮದ್ದಿನ ಪ್ರದರ್ಶನವಿರಲ್ಲ.
ದೆಹಲಿ ಮತ್ತು ಮುಂಬೈನಲ್ಲಿ ವಾಯು ಮಾಲಿನ್ಯ ವಿಪರೀತವಾಗಿರುವ ಹಿನ್ನಲೆಯಲ್ಲಿ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ. ಮೊನ್ನೆಯಷ್ಟೇ ಸ್ವತಃ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮುಂಬೈ ವಾಯು ಮಾಲಿನ್ಯದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕಳವಳ ವ್ಯಕ್ತಪಡಿಸಿದ್ದರು.
ಹೀಗಾಗಿ ಇಂದು ನಡೆಯಲಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಪಂದ್ಯದ ಗೆಲುವಿನ ಬಳಿಕ ಪಟಾಕಿ ಪ್ರದರ್ಶನವಿರಲ್ಲ. ಪರಿಸರ ಸಂರಕ್ಷಣೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.