Publish Date: Sat, 23 Jan 2021 (10:10 IST)
Updated Date: Sat, 23 Jan 2021 (10:12 IST)
ಮುಂಬೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ಫೆಬ್ರವರಿ 5 ರಿಂದ ಆರಂಭವಾಗಲಿರುವ ಕ್ರಿಕೆಟ್ ಸರಣಿ ವೀಕ್ಷಣೆ ಮಾಡುವ ಭಾಗ್ಯ ಪ್ರೇಕ್ಷಕರಿಗಿಲ್ಲ.
ಮೈದಾನದಲ್ಲಿ ಪ್ರೇಕ್ಷಕರಿಲ್ಲದೇ ಉಭಯ ತಂಡಗಳು ಕ್ರಿಕೆಟ್ ಆಡಲಿವೆ. ಕೊರೋನಾ ಕಾರಣದಿಂದಾಗಿ ಭಾರತದಲ್ಲಿ ಇನ್ನೂ ಕ್ರಿಕೆಟ್ ಪಂದ್ಯದಲ್ಲಿ ಮೈದಾನದಲ್ಲಿ ಉಪಸ್ಥಿತರಿರಲು ಪ್ರೇಕ್ಷಕರಿಗೆ ಅವಕಾಶ ನೀಡಲಾಗುತ್ತಿಲ್ಲ. ಆಸ್ಟ್ರೇಲಿಯಾದಲ್ಲಿ ಅರ್ಧಭಾಗದಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿತ್ತು. ಆದರೆ ಭಾರತದಲ್ಲಿ ಕೊರೋನಾ ಬಳಿಕ ನಡೆಯುತ್ತಿರುವ ಮೊದಲ ಕ್ರಿಕೆಟ್ ಸರಣಿ ಇದಾಗಿದ್ದು, ಪ್ರೇಕ್ಷಕರಿಗೆ ಅವಕಾಶ ನೀಡಲಾಗುತ್ತಿಲ್ಲ.