ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಸ್ಮೃತಿ ಮಂಧಾನ 50 ಎಸೆಗಳಲ್ಲಿ ಸೆಂಚುರಿ ಬಾರಿಸಿ ಕ್ರಿಕೆಟ್ ಜಗತ್ತಿನಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ. ಈ ಮೂಲಕ
ಅಂತರರಾಷ್ಟ್ರೀಯ ಪುರುಷ ಹಾಗೂ ಮಹಿಳೆಯರಲ್ಲಿ 50 ಎಸೆತದಲ್ಲಿ ಸೆಂಚುರಿ ಬಾರಿಸಿದ ಮೊದಲ ಆಟಗಾರ್ತಿ ಸ್ಮೃತಿ ಆಗಿದ್ದಾರೆ.
ಇನ್ನೂ ಇದು ವಿಶ್ವ ಕ್ರಿಕೆಟ್‌ನಲ್ಲಿ ಎರಡನೇ ಅತೀ ವೇಗದ ಶತಕವಾಗಿದೆ. ಇನ್ನೂ ವುಮೆನ್ಸ್ ODI ಕ್ರಿಕೆಟ್‌ನಲ್ಲಿ ಸ್ಮೃತಿ ಅವರು ಅತೀ ಹೆಚ್ಚು ಸೆಂಚುರಿ ಬಾರಿಸಿದವರಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ಕೇವಲ 63 ಎಸೆತಗಳಲ್ಲಿ 125 ರನ್ ಗಳಿಸಿ ಕ್ರಿಕೆಟ್ ಅಂಗಳದಲ್ಲಿ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ.
50 ಎಸೆತಗಳಲ್ಲಿ ಶತಕ ಗಳಿಸಿ, ಈ ಮಾದರಿಯಲ್ಲಿ 13ನೇ ಶತಕ ಗಳಿಸಿದರು. ಮಂಧಾನ ಅವರು ಪುರುಷರ ಮತ್ತು ಮಹಿಳೆಯರ ODI ಕ್ರಿಕೆಟ್‌ನಲ್ಲಿ ಅತೀ ವೇಗವಾಗಿ ಶತಕಗಳಿಸಿದ ಭಾರತೀಯ ಆಟಗಾರ್ತಿಯಾಗಿದ್ದಾರೆ.
ಸೌತ್‌ಪಾವ್ ಕೇವಲ 50 ಎಸೆತಗಳಲ್ಲಿ ತಮ್ಮ ಶತಕವನ್ನು ಗಳಿಸಿದರು, ಈ ಮೂಲಕ 2013 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 52 ಎಸೆತಗಳಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಮುರಿದರು.